More

    ಜುಲೈನಲ್ಲಿ 7ನೇ ವೇತನ ಆಯೋಗ ರಚನೆ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಹೇಳಿಕೆ

    ಹೊನ್ನಾಳಿ: ಕೇಂದ್ರದ ಮಾದರಿಯಲ್ಲಿ ವೇತನ ಪಡೆಯಲು ನೌಕರರು ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸಲಹೆ ನೀಡಿದರು.

    ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

    ನೌಕರರಿಗೆ 5 ವರ್ಷಕ್ಕೊಮ್ಮೆ ವೇತನ ಆಯೋಗ ರಚನೆಯಾಗುತ್ತದೆ. ಇದರಂತೆ ಜುಲೈನಲ್ಲಿ 7ನೇ ವೇತನ ಆಯೋಗ ರಚಿಸಿ, ಹೊಸ ವೇತನ ಲಭಿಸಲಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಬೇಕಿದೆ ಎಂದರು.

    ನೌಕರರು ಇಚ್ಛಾಶಕ್ತಿ, ಬದ್ಧತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಕರ್ನಾಟಕ ಸರ್ಕಾರಕ್ಕೆ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲೇ 5ನೇ ಸ್ಥಾನ ಸಿಗಲಿದೆ. ಎಲ್ಲ ಮಾರಕ ರೋಗಗಳಿಗೆ ಉಚಿತ ಚಿಕಿತ್ಸೆಗಾಗಿ ಬಜೆಟ್‌ನಲ್ಲಿ ಅನುದಾನ ಮಂಜೂರಾಗಿದೆ ಎಂದರು.

    ಸಂಘದ ತಾಲೂಕಾಧ್ಯಕ್ಷ ಬಿ.ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಬಸವನಗೌಡ ಕೊಟೂರ, ತಾಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ, ದಾವಣಗೆರೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಾಲಾಕ್ಷಿ ಮಾತನಾಡಿದರು.

    ಜಿಲ್ಲಾ ಸಂಘದ ಗೌರವಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಕಲ್ಲೇಶ್, ರಾಜ್ಯ ಪರಿಷತ್ ಸದಸ್ಯ ಸತೀಶ್, ಈಶ್ವರಪ್ಪ, ರುದ್ರೇಶ್, ನಾಗರಾಜ, ತಾಲೂಕು ಗೌರವಾಧ್ಯಕ್ಷ ಮುರುಗೇಶಪ್ಪ, ಕಾರ್ಯದರ್ಶಿ ಡಿ.ಇ. ಮಂಜುನಾಥ್, ರವಿಕುಮಾರ್, ಸತೀಶ್‌ಕುಮಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts