More

    NHM ಗುತ್ತಿಗೆ ನೌಕರರ ವೇತನ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ…

    ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸುವಂತೆ ಸರ್ಕಾರ ಆದೇಶ ಹೊರಡಿಲಾಗಿದೆ. ಗರಿಷ್ಟ  ಶೇ15 ರಷ್ಟು ವೇತನ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶ ಮಾಡಿದ್ದು ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

    ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಸಚಿವರಾಗಿರುವ ಡಾ| ಕೆ ಸುಧಾಕರ್ ತಮ್ಮ ಟ್ವೀಟ್ ನಲ್ಲಿ ‘ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

    ವೇತನ ಹೆಚ್ಚಳದ ಆದೇಶ ಎಪ್ರಿಲ್ 1ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಬಹು ದಿನಗಳ ಬೇಡಿಕೆ ಈಡೇರಿಸಿದಂತಾಗಿದೆ. ಇನ್ನು ಎಷ್ಟು ವರ್ಷಗಳ ಅನುಭವ ಇದೆ ಎನ್ನುವ ಆಧಾರದ ಮೇಲೂ ವೇತನ ಹೆಚ್ಚಳದ ವಿಂಗಡಣೆ ಮಾಡಲಾಗಿದ್ದು  3 ರಿಂದ 5 ವರ್ಷ ಸೇವೆ ಸಲ್ಲಿಸಿರುವವರಿಗೆ ಶೇ 5 ರಷ್ಟು, 5 ರಿಂದ 10 ವರ್ಷ ಸೇವೆ ಸಲ್ಲಿಸಿರುವರಿಗೆ ಶೇ10 ಪರ್ಸೆರಂಟ್, 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದವರಿಗೆ ಶೇ15 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

    Image

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts