More

    ವೇತನ ಸಮಸ್ಯೆ ಬಗೆಹರಿಸಲು ಒತ್ತಾಯ

    ಬೆಳಗಾವಿ: ವೇತನ ಸಮಸ್ಯೆ ಬಗೆಹರಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೌಕರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ಅಂಬೇಡ್ಕರ್ ಉದ್ಯಾನದಿಂದ ಜಿಪಂ ಕಚೇರಿವರೆಗೆ ಮೆರವಣಿಗೆ ನಡೆಸಿದ ಬಳಿಕ ಜಿಪಂ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ 6,024 ಗ್ರಾಪಂಗಳಲ್ಲಿ ಠರಾವು ಮೂಲಕ ನೇಮಕಗೊಂಡ 65 ಸಾವಿರ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ವೇತನಕ್ಕೆ ವಾರ್ಷಿಕ 900 ಕೋಟಿ ರೂ. ಅಗತ್ಯವಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಈಗಾಗಲೇ 518 ಕೋಟಿ ರೂ. ಬಿಡುಗಡೆಗೊಳಿಸಿದೆ. ಬಾಕಿ 382 ಕೋಟಿ ರೂ. ಹಣವನ್ನು ಈ ಬಾರಿ ಬಜೆಟ್‌ನಲ್ಲಿ ಬಿಜೆಪಿ ಸರ್ಕಾರ ಮೀಸಲಿಡಬೇಕು ಎಂದು ಆಗ್ರಹಿಸಿದರು.

    ಸಂಘದ ಅಧ್ಯಕ್ಷ ವಿ.ಪಿ.ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಜಿ.ಎಂ.ಜೈನೇಖಾನ್, ಸಂಜು ಹೊಸಮನಿ, ವೀರಭದ್ರ ಕಂಪ್ಲಿ, ಎಲ್.ಎಸ್. ನಾಯಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts