ಸಂಘ-ಸಂಸ್ಥೆಗಳಿಂದ ಜನರ ಜೀವನಮಟ್ಟ ಸುಧಾರಣೆ : ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಆಶಯ

New Project (41)
Published on

ಮಧೂರು: ಸಂಘ ಸಂಸ್ಥೆಗಳು ಜನರ ಜೀವನಮಟ್ಟವನ್ನು ಸುಧಾರಿಸಲು, ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಮಾಜದ ಅಭಿವೃದ್ಧಿಗೆ ಸಹಾಯ ಮಾಡುವಲ್ಲಿ ಶ್ರಮಿಸಬೇಕು ಎಂದು ಸಾಲಿಗ್ರಾಮ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಹೇಳಿದರು.

ಸಾಲಿಗ್ರಾಮ ಕೂಟ ಮಹಾಜಗತ್ತು ಕಾಸರಗೋಡು ಘಟಕದ 200ನೇ ಸಂಪರ್ಕ ಸಭೆಯಲ್ಲಿ ಮಾತನಾಡಿದರು.

ಕಾಸರಗೋಡು ಅಂಗಸಂಸ್ಥೆ ಅಧ್ಯಕ್ಷ ಶಂಕರ ನಾರಾಯಣ ಮಯ್ಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗುರು ನರಸಿಂಹ ಬಿಲಿಯನ್ ಫೌಂಡೇಶನ್‌ನ ಅಧ್ಯಕ್ಷ ಗೋಪಾಲಕೃಷ್ಣ ಹೇರಳೆ ಶುಭಹಾರೈಸಿದರು. ಕಳೆದ ಸಾಲಿನ ಎಲ್.ಎಸ್.ಎಸ್, ಎಸ್ಸೆಸ್ಸೆಲ್ಸಿ, ಹೈಯರ್ ಸೆಕೆಂಡರಿ, ದಂತ ವಿಜ್ಞಾನ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದವರನ್ನು ಗೌರವಿಸಲಾಯಿತು. ಪಿಎಚ್‌ಡಿ ಪದವಿ ಪಡೆದ ಡಾ.ಪರಿಣಿತ ರವಿ ಅವರಿಗೆ ವಾಮಂಜೂರು ಶ್ರೀ ಶಾಸ್ತಾವೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಡಿ.ಸದಾಶಿವ ರಾವ್ ಅಭಿನಂದಿಸಿದರು.

ಕಲಾ ಕುಂಚ ಕೇರಳ ಗಡಿನಾಡ ಘಟಕ ಅಧ್ಯಕ್ಷೆ ಜಯಲಕ್ಷ್ಮೀ ಕಾರಂತ ‘ಸಂಕೀರ್ತನ’ ಎಂಬ ಭಜನಾ ಸಂಗ್ರಹ ಪುಸ್ತಕ ಬಿಡುಗಡೆ ಮಾಡಿದರು. ಸಾಲಿಗ್ರಾಮ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಶ್ರೀಧರ ರಾವ್, ಅರಂತೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ವಾಸುದೇವ ಆಸ್ರ ಮುಂತಾದವರು ಉಪಸ್ಥಿತರಿದ್ದರು. ನಾರಾಯಣ ಅಡಿಗ ಅರಂತೋಡು ಅವರನ್ನು ಗೌರವಿಸಲಾಯಿತು. ಕಾರ್ಯದರ್ಶಿ ನರಸಿಂಹ ಮಯ್ಯ ಎಂ. ಮಧೂರು ಸ್ವಾಗತಿಸಿದರು. ಕೃಷ್ಣಪ್ರಸಾದ್ ಅಡಿಗ ವಂದಿಸಿದರು. ಕೋಶಾಧಿಕಾರಿ ಕೃಷ್ಣ ಕಾರಂತ ಬನ್ನೂರು ನಿರೂಪಿಸಿದರು.

ವಿಷ್ಣುಸಹಸ್ರನಾಮ ಪಾರಾಯಣ

ಕೂಟ ಬಂಧು ನಾರಾಯಣ ಅಡಿಗ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾಸರಗೋಡು ಅಂಗಸಂಸ್ಥೆಯ ಸದಸ್ಯರಿಂದ ವಿಷ್ಣುಸಹಸ್ರನಾಮ ಪಾರಾಯಣ, ಶ್ರೀ ನೃಸಿಂಹ ಅಷ್ಟೋತ್ತರ ಪಠನ ಹಾಗೂ ಭಜನಾ ಸಂಕೀರ್ತನೆ ನಡೆಯಿತು. ನಂತರ ಬಂಟ್ವಾಳ ಅಂಗ ಸಂಸ್ಥೆಯ ಸದಸ್ಯರಿಂದ ಭಜನಾ ಸಂಕೀರ್ತನೆ, ಮೀಯಪದವು ಅಂಗ ಸಂಸ್ಥೆಯ ಸದಸ್ಯರಿಂದ ಕುಣಿತ ಭಜನೆ ಜರುಗಿತು. ಬೆಳಗ್ಗೆ ಶ್ರೀ ಗಣಪತಿ ಹೋಮ ಮತ್ತು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಕಾರ್ತಿಕ ಪೂಜೆ ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net