ಸಾಲಿಗ್ರಾಮ ನಮ್ಮ ಕ್ಲಿನಿಕ್ ಉದ್ಘಾಟನೆ

namma clinic
ನಮ್ಮ ಕ್ಲಿನಿಕ್ ಅನ್ನು ಕುಂದಾಪುರದ ಶಾಸಕ ಕಿರಣ್ ಕುವಾರ್ ಕೊಡ್ಗಿ ಲೋಕಾರ್ಪಣೆಗೊಳಿಸಿದರು.
Published on

ಕೋಟ: ಸರ್ಕಾರ ರೂಪಿಸುವ ಎಲ್ಲ ಕಾರ್ಯಕ್ರಮಗಳು ಜನಸಾಮಾನ್ಯರ ಬಾಳಿಗೆ ಬೆಳಕು ಚೆಲ್ಲುವ ಯೋಜನೆಗಳಾಗಿ ರೂಪುಗೊಂಡಿವೆ ಇದಕ್ಕೆ ಪುಷ್ಠಿ ನೀಡುವಂತೆ ನಮ್ಮ ಕ್ಲಿನಿಕ್ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕಾರ್ಯಕ್ರಮಗಳಾಗಿದೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸಿ ಶುಭ ಹಾರೈಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಜಿ.ಹುಬ್ಬಳ್ಳಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನಿತಾ ಶೆಟ್ಟಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಸೂಯ ಹೇರ್ಳೆ, ವಾರ್ಡ್ ಸದಸ್ಯೆ ರೇಖಾ ಕೇಶವ ಕರ್ಕೇರ, ಆರೋಗ್ಯ ನಿರೀಕ್ಷಕಿ ಮಮತಾ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾವೇಂದ್ರ ರಾವ್, ಪ.ಪಂ ಸದಸ್ಯರಾದ ರಾಜು ಪೂಜಾರಿ, ಪುನಿತ್ ಪೂಜಾರಿ, ಸುಲತಾ ಹೆಗ್ಡೆ, ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್, ನಮ್ಮ ಕ್ಲಿನಿಕ್‌ನ ವೈದ್ಯೆ ಡಾ.ಸುಶ್ಮಿತಾ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್ ಪ್ರಾಸ್ತಾವಿಸಿದರು. ಜಿಲ್ಲಾ ಆರೋಗ್ಯ ಇಲಾಖೆಯ ಮಂಜುನಾಥ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net