18.1 C
Bangalore
Saturday, December 7, 2019

ಬಡ ಗಾಯಕಿ ರಾಣು ಮಂಡಲ್​ಗೆ ಸಲ್ಮಾನ್​ ಖಾನ್​ ಉಡುಗೊರೆ ನೀಡಿದ್ದು ನಿಜವಲ್ಲ, ಸಿಕ್ಕಿಲ್ಲ 55 ಲಕ್ಷ ರೂ.ಮೌಲ್ಯದ ಫ್ಲ್ಯಾಟ್​…

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ನವದೆಹಲಿ: ಲತಾ ಮಂಗೇಶ್ಕರ್ ಹಾಡಿರುವ ಏಕ್ ಪ್ಯಾರ್ ಕಾ ನಗ್ಮಾ ಹೈ ಹಾಡನ್ನು ಹಾಡಿ ರಾತ್ರೋರಾತ್ರಿ ಫೇಮಸ್‌ ಆಗಿದ್ದ ರಾಣು ಮರಿಯಾ ಮಂಡಲ್ ಇದೀಗ ಇಂಟರ್‌ನೆಟ್‌ ಸೆನ್ಸೇಷನ್‌. ರಾಣಾಘಾಟ್‌ ರೈಲ್ವೆ ನಿಲ್ದಾಣದಲ್ಲಿ ಹಳೇ ಹಿಂದಿ ಹಾಡುಗಳನ್ನು ಹಾಡುತ್ತ ಭಿಕ್ಷೆ ಬೇಡುತ್ತಿದ್ದ ರಾಣು ಇದೀಗ ಬಾಲಿವುಡ್​ ಗಾಯಕಿಯಾಗಿಯೇ ಬದಲಾಗಿದ್ದಾರೆ.

ರಾಣು ಕಂಠದಲ್ಲಿ ಕೇಳಿದ ಸಂಗೀತ ನಿರ್ದೇಶಕ ಹಿಮೇಶ್​ ರೇಷ್ಮಿಯಾ ‘ಹ್ಯಾಪಿ ಹಾರ್ಡಿ ಮತ್ತು ಹೀರ್’ ಚಿತ್ರಕ್ಕಾಗಿ ಈಗಾಗಲೇ ಎರಡು ಹಿಂದಿಹಾಡುಗಳನ್ನು ರಾಣು ಅವರ ಬಳಿಯೇ ಹಾಡಿಸಿ, ಅದನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ರಾಣು ಧ್ವನಿ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಹಲವರು ಮೆಚ್ಚಿಕೊಂಡಿದ್ದರು. ಅದರಲ್ಲೂ ನಟ ಸಲ್ಮಾನ್​ ಖಾನ್ ರಾಣು ಅವರ ಧ್ವನಿಗೆ ಮನಸೋತು 55 ಲಕ್ಷ ರೂಪಾಯಿ ಬೆಲೆಬಾಳುವ ಫ್ಲ್ಯಾಟ್​ವೊಂದನ್ನು ​ಉಡುಗೊರೆಯಾಗಿ ನೀಡಿದ್ದಾರೆ ಎಂದು ಹಿಂದಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಇದು ವೈರಲ್​ ಆಗಿ, ಸಲ್ಮಾನ್​ ಖಾನ್​ ಅವರದ್ದು ದೊಡ್ಡ ಗುಣ ಎಂದೆಲ್ಲ ಹೊಗಳಿಕೆಗಳ ಮಹಾಪೂರವೇ ಹರಿದುಬಂದಿತ್ತು.

ಇದೀಗ ಇದರ ಸತ್ಯಾಸತ್ಯತೆ ಬಗ್ಗೆ ಮಾತನಾಡಿದ ರಾಣಾಘಾಟ್​ ಆಮ್ರ ಶೋಬಾಯ್​ ಶೋಯಿತಾನ್​ ಕ್ಲಬ್​ನ ಸದಸ್ಯ ವಿಕ್ಕಿ ಬಿಸ್ವಾಸ್​, ರಾಣು ಮಂಡಲ್​ ಅವರು ಖ್ಯಾತಿ ಪಡೆಯುತ್ತಿದ್ದಂತೆ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳುಸುದ್ದಿಗಳು ಹರಡುತ್ತಿವೆ ಎಂದು ಹೇಳಿದ್ದಾರೆ.

ನಟ ಸಲ್ಮಾನ್​ ಖಾನ್​ ಅವರು ರಾಣು ಮಂಡಲ್​ಗೆ 55 ಲಕ್ಷ ರೂಪಾಯಿ ಮೌಲ್ಯದ ಮನೆ ಉಡುಗೊರೆಯಾಗಿ ಕೊಟ್ಟಿದ್ದು ಸುಳ್ಳು. ಇದೊಂದು ಫೇಕ್​ ಸುದ್ದಿ ಎಂದಿದ್ದಾರೆ.

ಹಾಗೇ ರಾಣು ಅವರು 15 ಲಕ್ಷ ರೂಪಾಯಿ ಮೌಲ್ಯದ ಕಾರು ಖರೀದಿ ಮಾಡಿದ್ದಾರೆ, ಅವರನ್ನು ಬಿಗ್​ ಬಾಸ್​ಗೆ ಕರೆಯಲಾಗಿದೆ, ಹಿಮೇಶ್​ ರೇಷ್ಮಿಯಾ ಅವರು ತಮ್ಮ ಸಿನಿಮಾಕ್ಕೆ ಹಾಡು ಹಾಡಿಸಿದ್ದಕ್ಕೆ 50 ಲಕ್ಷ ರೂಪಾಯಿ ನೀಡಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸಿಕ್ಕಾಪಟೆ ವೈರಲ್​ ಆಗುತ್ತಿದ್ದು ಅವೆಲ್ಲ ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮ ಕ್ಲಬ್​ನ ಇಬ್ಬರು ಸದಸ್ಯರು ರಾಣಾಘಟ್​ ರೈಲ್ವೆ ಸ್ಟೇಶನ್​ನಲ್ಲಿ ಹಾಡುತ್ತಿದ್ದ ರಾಣು ಅವರ ವಿಡಿಯೋ ಮಾಡಿದ್ದರು. ಅದನ್ನು ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ ಬಳಿಕ ತುಂಬ ವೈರಲ್​ ಆಗಿತ್ತು.

ಅಂದಿನಿಂದಲೂ ರಾಣು ಮಂಡಲ್​ ಅವರನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ. ಅವರಿಗೆ ಸಂಬಂಧಪಟ್ಟ ವಿಚಾರಗಳು ನಮಗೆ ತಿಳಿಯುತ್ತವೆ. ಇವತ್ತಿನವರೆಗೆ ಅವರಿಗೆ ಫ್ಲ್ಯಾಟ್​ ಉಡುಗೊರೆಯಾಗಿ ಸಿಕ್ಕ ಬಗ್ಗೆ ಕೇಳಿಲ್ಲ ಎಂದು ಹೇಳಿದ್ದಾರೆ.

ರಾಣು ಅವರ ಏಕ್ ಪ್ಯಾರ್ ಕಾ ನಗ್ಮಾ ಹೈ ಹಾಡು ವೈರಲ್​ ಆಗುತ್ತಿದ್ದಂತೆ ಸಂಗೀತ ನಿರ್ದೇಶಕ ಹಿಮೇಶ್​ ರೇಷ್ಮಿಯಾ ಆಕೆಯನ್ನು ಸೂಪರ್​ಸ್ಟಾರ್​ ಸಿಂಗರ್​ ರಿಯಾಲಿಟಿ ಶೋದಲ್ಲಿ ಹಾಡುವಂತೆ ಕರೆದಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...