More

    ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಬ್ಯಾಕ್ಟೀರಿಯಾ ಪತ್ತೆ; ಕಾರ್ಖಾನೆ ಸ್ಥಗಿತ!

    ಬ್ರಸೆಲ್ಸ್: ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಸಲ್ಮೊನೆಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಸದ್ಯ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ.

    ಬೆಲ್ಜಿಯಂನ ವೈಜ್ ನಗರದಲ್ಲಿರುವ ಸ್ವಿಸ್ ದೈತ್ಯ ಬ್ಯಾರಿ ಕ್ಯಾಲೆಬಾಟ್ ನಡೆಸುತ್ತಿರುವ ಚಾಕೊಲೇಟ್ ಫ್ಯಾಕ್ಟರಿ ವಿಶ್ವದಲ್ಲೇ ಅತ್ಯಂತ ದೊಡ್ಡ ಫ್ಯಾಕ್ಟರಿಯಾಗಿದೆ. ಅದರಲ್ಲಿ ಸಲ್ಮೊನೆಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿರುವುದು ಚಾಕೊಲೇಟ್ ಪ್ರಿಯರಿಗೆ ಆಘಾತ ತಂದಿದೆ. ಅದರಲ್ಲೂ ಈ ಬ್ಯಾಕ್ಟೀರಿಯಾ ಚಿಕ್ಕ ಮಕ್ಕಳ ಮೇಲೆ ತುಂಬಾ ಪರಿಣಾಮ ಬೀರುತ್ತದೆ.

    ಸದ್ಯ ಕಾರ್ಖಾನೆಯಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಿಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಕಂಪನಿ, ಪರೀಕ್ಷೆಯ ಬಳಿಕ ತಯಾರಿಸಲಾದ ಎಲ್ಲಾ ಉತ್ಪನ್ನಗಳನ್ನು ನಿರ್ಬಂಧಿಸಲಾಗಿದೆ. ಬ್ಯಾಕ್ಟೀರಿಯಾ ಕಂಡುಬಂದಂತೆ ಉತ್ಪನ್ನಗಳನ್ನು ಪಡೆದಿರುವ ಎಲ್ಲಾ ಗ್ರಾಹಕರನ್ನು ಸಂಪರ್ಕಿಸಲಾಗುತ್ತಿದೆ. ಮುಂದಿನ ಸೂಚನೆ ಬರುವವರೆಗೂ ಚಾಕೊಲೇಟ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

    ವಿಶ್ವದ ನಂ.1 ಚಾಕೊಲೇಟ್ ತಯಾರಿಕಾ ಕಂಪನಿ: ಬ್ಯಾಕ್ಟೀರಿಯಾ ಕಂಡು ಬಂದಿರುವ ಫ್ಯಾಕ್ಟರಿ, ವಿಶ್ವದ ನಂ.1 ಚಾಕೊಲೇಟ್ ತಯಾರಿಕಾ ಕಂಪನಿ ಇದಾಗಿದ್ದು, 2020-2021 ಹಣಕಾಸು ವರ್ಷದಲ್ಲಿ 2 ಕೋಟಿ ಟನ್‌ಗಳಷ್ಟು ಉತ್ಪನ್ನಗಳು ಮಾರಾಟವಾಗಿವೆ. ಕಂಪನಿಯಲ್ಲಿ 13,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಪ್ರಪಂಚದಾದ್ಯಂತ 60ಕ್ಕೂ ಹೆಚ್ಚು ಉತ್ಪಾದನಾ ಘಟಕಗಳಿವೆ.

    ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts