More

    ಚೈತ್ರಾ ಕುಂದಾಪುರ ಪ್ರಕರಣ; ನಗರ ಪೊಲೀಸ್​ ಆಯುಕ್ತರ ಕಚೇರಿ ಎದುರು ಸಾಲುಮರದ ತಿಮ್ಮಕ್ಕ ಪ್ರತಿಭಟನೆ

    ಬೆಂಗಳೂರು: ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ನನ್ನ ಹಾಗೂ ಮಗ ಉಮೇಶ್​ ಹೆಸರು ಬಳಸಿಕೊಂಡು ತೇಜೋವಧೆ ಮಾಡಲಾಗಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬುಧವಾರ ನಗರ ಪೊಲೀಸ್​ ಆಯುಕ್ತರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ಧಾರೆ.

    ಈ ವೇಳೆ ಮಾತನಾಡಿದ ಅವರು ಚೈತ್ರಾ ಕುಂದಾಪುರ ಹಾಗೂ ಗಗನ್​ ಕಡೂರು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಆದರೆ, ಪ್ರಕರಣದಲ್ಲಿ ನಮ್ಮಿಬ್ಬರ ಹೆಸರನ್ನು ತಳಕು ಹಾಕಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ನನ್ನ ಸಂಪೂರ್ಣ ಜೀವನವನ್ನು ನಾನು ಪರಿಸರಕ್ಕಾಗಿ ಮೀಸಲಿಟ್ಟಿದ್ದೇನೆ. ನಮಗೆ ಸರ್ಕಾರ ನೀಡಿದ ಸವಲತ್ತುಗಳನ್ನು ಬೇರೆಯವರಿಗೆ ನೀಡಿ ವಂಚನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಸುದ್ದಿ ವಾಹಿನಿಯೊಂದರಲ್ಲಿ ನಮ್ಮ ಬಗ್ಗೆ ಪ್ರಸಾರ ಮಾಡಲಾಗಿದೆ. ವರದಿ ಮಾಡಿದವರು ಸೂಕ್ತ ಸಾಕ್ಷ್ಯಗಳನ್ನು ನೀಡಬೇಕು. ಕಲ್ಪಿತ ವರದಿ ನಮ್ಮ ಗೌರವಕ್ಕೆ ಧಕ್ಕೆ ಉಂಟು ಮಾಡಿದೆ.

    ಸಾಲುಮರದ ತಿಮ್ಮಕ್ಕ ಪ್ರತಿಭಟನೆ

    ಇದನ್ನೂ ಓದಿ: ಸೋನಿಯಾ ಗಾಂಧಿ ಸದನದಲ್ಲೇ ಸಂಸದನ ಕಾಲರ್​ ಹಿಡಿಯಲು ಯತ್ನಿಸಿದ್ದರು: ಬಿಜೆಪಿ ಸಂಸದ ನಿಶಿಕಾಂತ್​ ದುಬೆ

    ನಾನು ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿದ್ದು, ಸಂಪುಟ ದರ್ಜೆ ಸ್ಥಾನಮಾನ ಹೊಂದಿದ್ದೇನೆ. ಸರ್ಕಾರದ ವತಿಯಿಂದ ನೀಡಲಾಗಿರುವ ಕಾರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರಸಾರ ಮಾಡಲಾಗಿದೆ. ನನ್ನ ಕಾರನ್ನು ಆರೋಪಿ ಚನ್ನನಾಯಕ ಬಳಕೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಗಗನ್​ ಕಡೂರು ವಿಧಾನಸೌಧದಲ್ಲಿ ನನಗೆ ನೀಡಲಾಗಿರುವ ಕೊಠಡಿಯನ್ನು ನವೀಕರಣ ಮಾಡಿಕೊಟ್ಟಿದ್ದಾನೆ ಎಂದು ಸುದ್ದಿ ಪ್ರಸಾರ ಮಾಡಲಾಗಿದೆ.

    ಮೊದಲಿಗೆ ನನಗೆ ವಿಧಾನಸೌಧದಲ್ಲಿ ಕೊಠಡಿ ಇಲ್ಲ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡಿರುವುದು ಎಲ್ಲಾ ಸುಳ್ಳು. ಒಂದು ವೇಳೆ ನಾವು ತಪ್ಪು ಮಾಡಿದ್ದರೆ ನಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಿ ಈ ರೀತಿ ತೇಜೋವಧೆ ಮಾಡಿರುವುದು ನೋವು ತರಿಸಿದೆ ಎಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts