ಬಿದ್ದು ಗಾಯಗೊಂಡ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

Salumarada thimmakka
Published on

ಬೆಂಗಳೂರು: ಪರಿಸರ ಪ್ರೇಮಿ, ವೃಕ್ಷಮಾತೆ ಎಂದೇ ಕರೆಯಲ್ಪಡುವ ಸಾಲುಮರದ ತಿಮ್ಮಕ್ಕ ಬಿದ್ದು ಗಾಯಗೊಂಡು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರಿಗೆ ಚಿಕಿತ್ಸೆ ನಡೆಯುತ್ತಿದೆ.

ಸಾಲುಮರದ ತಿಮ್ಮಕ್ಕ ಇಂದು ಸಂಜೆ 4.30ರ ಸುಮಾರಿಗೆ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಗಾಯಗೊಂಡಿದ್ದರು. ಹೀಗಾಗಿ ವಿಪರೀತ ನೋವಿನಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ವೈದ್ಯರು ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದು, ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲದಿಂದ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net