More

    ಸಾಲೂರು ಮಠಕ್ಕೆ ಎಂ.ನಾಗೇಂದ್ರ ಉತ್ತರಾಧಿಕಾರಿ, ಪಟ್ಟಾಧಿಕಾರ ಮಹೋತ್ಸವ ನಾಳೆ

    ಚಾಮರಾಜನಗರ: ಶ್ರೀ ಮಲೆ ಮಹದೇಶ್ವರರು ಸ್ಥಾಪಿಸಿದ ಸಾಲೂರು ಬೃಹನ್ಮಠಕ್ಕೆ ಬಂಡಹಳ್ಳಿ ಗ್ರಾಮದ ಎಂ.ನಾಗೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ.

    ಮಠದ ಗುರು ಸ್ವಾಮೀಜಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಕಿರಿಯ ಶ್ರೀಗಳಾಗಿದ್ದ ಇಮ್ಮಡಿ ಮಹದೇವಸ್ವಾಮಿ ‘ಸುಳ್ವಾಡಿ ವಿಷ ಪ್ರಸಾದ ಪ್ರಕರಣ’ದಡಿ ಜೈಲು ಸೇರಿದ್ದು, ಮಠವನ್ನು ಮುನ್ನಡೆಸಲು ಹನೂರು ತಾಲೂಕಿನ ಬಂಡಹಳ್ಳಿ ಗ್ರಾಮದ ಸುಂದ್ರಮ್ಮ ಮತ್ತು ಮಹದೇವಪ್ಪ ದಂಪತಿ ಪುತ್ರ ನಾಗೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.‌

    ಇದನ್ನೂ ಓದಿರಿ ಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್​!

    ಆ.8ರಂದು ಬೆಳಗ್ಗೆ ಮಠದ ಆವರಣದಲ್ಲಿ ವಟುವಿನ ಪಟ್ಟಾಧಿಕಾರ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಉತ್ತರಾಧಿಕಾರಿ ಆಯ್ಕೆ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯದರ್ಶಿ ಮಹದೇವಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಟುವಿನ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಮಠದ ಬಳಿ ಕೆಲ ಭಕ್ತರು ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಸಾಲೂರು ಮಠದಿಂದ ತಮ್ಮ ಉಚ್ಛಾಟನೆ ಮತ್ತು ಉತ್ತರಾಧಿಕಾರಿ ನೇಮಕ ಸಂಬಂಧ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಪಡೆದಿದ್ದ ತಾತ್ಕಾಲಿಕ ನಿರ್ಬಂಧ ತಡೆಯಾಜ್ಞೆಯನ್ನು ಕೊಳ್ಳೇಗಾಲ ಸಿವಿಲ್ ನ್ಯಾಯಾಲಯ ಇತ್ತೀಚಿಗಷ್ಟೇ ರದ್ದುಗೊಳಿಸಿತ್ತು.

    ದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts