ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ!

i
Published on

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದು, ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂಗೀಕರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್​ ಹೇಳಿದೆ.

ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿರುವಾಗಲೇ ಕಾಂಗ್ರೆಸ್, ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ಇವತ್ತು ಮತ್ತೊಂದು ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net