ಸಿಟಾಡೆಲ್ ಚಿತ್ರೀಕರಣದಲ್ಲಿ ಸಮಂತಾ ಕೈಗೆ ಗಾಯ!

samantha
Published on

ಹೈದರಾಬಾದ್​: ಸಿಟಾಡೆಲ್ ವೆಬ್ ಸಿರೀಸ್ ಚಿತ್ರೀಕರಣದ ವೇಳೆ ನಟಿ ಸಮಂತಾ ಕೈಗೆ ಗಾಯಗಳಾಗಿವೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಕೈಗೆ ಗಾಯಗಳಾಗಿರುವ ಚಿತ್ರವನ್ನು ಸಮಂತಾ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಚಿತ್ರೀಕರಣದಲ್ಲಿ ನಡೆದ ಘಟನೆಯಿಂದ ಆದದ್ದು ಎಂದು ಬರೆದುಕೊಂಡಿದ್ದಾರೆ. ರಕ್ತಸಿಕ್ತ ಬೆರಳುಗಳನ್ನು ಕಂಡು ಅಭಿಮಾನಿಗಳು ಆತಂಕಗೊಂಡಿದ್ದಾರೆ. ಕಾಮೆಂಟ್​​ ಮಾಡುವ ಮೂಲಕವಾಗಿ ನಟಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಸಮಂತಾ ಸದ್ಯ ಹಿಂದಿಯಲ್ಲಿ ತಯಾರಾಗುತ್ತಿರುವ ‘ಸಿಟಾಡೆಲ್’ ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿಯಲ್ಲಿ ಸಮಂತಾ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಸಿಟಾಡೆಲ್ ಸಾಹಸ ಪ್ರಧಾನ ವೆಬ್ ಸರಣಿ. ಹೇರಳವಾಗಿ ಆ್ಯಕ್ಷನ್ ಸನ್ನಿವೇಶಗಳು ಅದರಲ್ಲಿ ಇವೆಯಂತೆ. ಇಂತಹ ದೃಶ್ಯಗಳನ್ನು ಸೆರೆ ಹಿಡಿಯುವ ಸಂದರ್ಭದಲ್ಲಿ ಸಮಂತಾ ಬೆರಳುಗಳಿಗೆ ಗಾಯಗಳಾಗಿವೆ. ಕೂಡಲೇ ಚಿಕಿತ್ಸೆ ಪಡೆದುಕೊಂಡಿರುವ ಅವರು, ನಂತರ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡರು ಎಂದು ಹೇಳಲಾಗುತ್ತಿದೆ.

ಸಮಂತಾ ಹಾಗೂ ವರುಣ್ ಧವನ್ ಒಟ್ಟಾಗಿ ವೆಬ್​ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​’ ಖ್ಯಾತಿಯ ರಾಜ್ ಹಾಗೂ ಡಿಕೆ ಈ ಸೀರಿಸ್​ಗೆ ನಿರ್ದೇಶನ ಮಾಡುತ್ತಿದ್ದಾರೆ. ಇದರ ಶೂಟಿಂಗ್ ಈಗ ಆರಂಭ ಆಗಿದೆ. ಅಮೇಜಾನ್​ ಪ್ರೈಮ್ ವಿಡಿಯೋ ಮೂಲಕ ಈ ಸೀರಿಸ್ ರಿಲೀಸ್ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net