

ಮುಂಬೈ: ಟಾಲಿವುಡ್, ಕಾಲಿವುಡ್, ವೆಬ್ಸರಣಿಗಳಲ್ಲಿ ಮಿಂಚಿದ ಸೌತ್ ಬ್ಯೂಟಿ ಸಮಂತಾ 2023ರಲ್ಲಿ ತೆರೆಕಂಡ ಕುಶಿ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ತಮ್ಮ ಆರೋಗ್ಯ ಸಮಸ್ಯೆಯಿಂದ ಸ್ವಲ್ಪ ಸಮಯದ ಸಿನಿಮಾದಿಂದ ದೂರ ಉಳಿದಿದ್ದ ನಟಿ ಈಗ ಸದ್ದಿಲ್ಲದೆ ಮುಂದಿನ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಮಾಲಿವುಡ್ನಲ್ಲಿ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಮೆಗಾಸ್ಟಾರ್ ಮಮ್ಮುಟ್ಟಿ ಅವರ ಮುಂಬರುವ ಸಿನಿಮಾದಲ್ಲಿ ನಟಿ ಸಮಂತಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿರುವ ಇನ್ನೂ ಹೆಸರಿಡದ ಈ ಸಿನಿಮಾವನ್ನು ಗೌತಮ್ ವಾಸುದೇವ್ ಮೆನನ್ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಟಿ ಸಮಂತಾ ಜೂನ್ 15ರಂದು ಚೆನ್ನೈನಲ್ಲಿ ಚಿತ್ರೀಕರಣದಲ್ಲಿ ಆರಂಭಿಸಲಿದ್ದಾರೆ. ನಟ ಮಮ್ಮುಟ್ಟಿ ಜೂನ್ 20ರಂದು ಸೆಟ್‌ಗೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಜೋಡಿ ಭೇಟಿ ಇದೆ ಮೊದಲೆನಲ್ಲ. ಈ ಹಿಂದೆ ಮಮ್ಮುಟ್ಟಿ ಮತ್ತು ಸಮಂತಾ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದರು.ಈ ಮೊದಲು ಸಿನಿಮಾದಲ್ಲಿ ಮಮ್ಮುಟಿಗೆ ನಾಯಕಿಯಾಗಿ ಲೇಡಿ ಸೂಪರ್ಸ್ಟಾರ್ ನಯನತಾರ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಕಾರಣಾಂತರಗಳಿಂದ ನಯನತಾರಾ ಸಿನಿಮಾವನ್ನು ಬಿಟ್ಟ ಬಳಿಕ ಆ ಸ್ಥಾನಕ್ಕೆ ಸಮಂತಾರನ್ನು ಬದಲಾಯಿಸಲಾಗಿದೆ ಎನ್ನಲಾಗುತ್ತಿದೆ.(ಏಜೆನ್ಸೀಸ್)