14 ವರ್ಷಗಳ ಹಿಂದೆ ಹೇಗಿದ್ದರು ನೋಡಿ ಸ್ಟಾರ್​ ನಟಿ! ಇವರು ಯಾರೆಂದು ಗುರುತಿಸಬಲ್ಲಿರಾ? South Actress

South Actress
Published on

South Actress : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್​ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್​ ಹಾಗೂ ವಾಚ್​ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಬಾಲ್ಯದಲ್ಲಿ ಹೇಗಿದ್ದರು? ಸಿನಿಮಾಗೆ ಬರುವ ಮುಂಚೆ ಹೇಗೆ ಕಾಣುತ್ತಿದ್ದರು ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.

ತಾಜಾ ಸಂಗತಿ ಏನೆಂದರೆ, ದಕ್ಷಿಣ ಭಾರತದ ಜನಪ್ರಿಯ ನಟಿ ಸಮಂತಾ ಅವರ 14 ವರ್ಷದ ಹಿಂದಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್​ ಆಗಿದೆ. ಜಾಹೀರಾತು ವಿಡಿಯೋ ಆಗಿದ್ದು, ಆಗಿನ ಸಮಂತಾಗೂ ಈಗಿನ ಸಮಂತಾಗೂ ಇರುವ ವ್ಯತ್ಯಾಸವನ್ನು ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಏಕೆಂದರೆ ಸಮಂತಾ ಮೊದಲು ಸಂಪೂರ್ಣವಾಗಿ ವಿಭಿನ್ನವಾಗಿ ಕಾಣುತ್ತಿದ್ದರು.

ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ, ಸಮಂತಾ ಬ್ರಾಂಡ್ ಒಂದನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ. ಪ್ರಕಾಶಮಾನವಾದ ಗುಲಾಬಿ ಮತ್ತು ಹಳದಿ ಬಣ್ಣದ ಉಡುಗೆಯಲ್ಲಿ ನೃತ್ಯ ಮಾಡುತ್ತಾ ನಗುತ್ತಿರುವುದನ್ನು ಕಾಣಬಹುದು. ಅಲ್ಲದೆ, ವಿವಿಧ ಮುಖಭಾವಗಳನ್ನು ಸಹ ವ್ಯಕ್ತಪಡಿಸಿದ್ದಾರೆ.

ಆ ಸಮಯದಲ್ಲಿ ಸಮಂತಾ ಎಷ್ಟು ವಿಭಿನ್ನವಾಗಿದ್ದಾರೆ ಅಂದರೆ ನಂಬಲೂ ಕೂಡ ಸಾಧ್ಯವಿಲ್ಲ. ನಿಜಕ್ಕೂ ಗುರುತು ಹಿಡಿಯುವುದು ತುಂಬಾ ಕಷ್ಟವಾಗುತ್ತದೆ. ಸಮಂತಾ ಎಷ್ಟೊಂದು ಬದಲಾಗಿದ್ದಾರೆ ನೋಡಿ ಎಂದು ನೆಟ್ಟಿಗರು ಕಾಮೆಂಟ್​ಗಳ ಸುರಿಮಳೆಗೈಯುತ್ತಿದ್ದಾರೆ. ಹಳೆಯ ವಿಡಿಯೋದಲ್ಲಿ ನನಗೆ ಸಮಂತಾ ಕಾಣಿಸುತ್ತಿಲ್ಲ ಎಂದು ಕೆಲ ನೆಟ್ಟಿಗರೊಬ್ಬರು ನಗೆಚಟಾಕಿ ಹಾರಿಸಿದ್ದಾರೆ. ಹಳೆಯ ವಿಡಿಯೋ ನೋಡುತ್ತಿದ್ದರೆ ಬಹುಶಃ ಸಮಂತಾ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡಿರಬಹುದುದೆಂದು ಇನ್ನೋರ್ವ ನೆಟ್ಟಿಗ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಈ ವಿಡಿಯೋ ನೋಡಿ ನಿಮಗೆ ಏನು ಅಸಿನಿತು ಎಂಬುದನ್ನು ಕಾಮೆಂಟ್​ ಮೂಲಕ ನಮಗೆ ತಿಳಿಸಿ.

ಅಂದಹಾಗೆ ಸಮಂತಾ ಅವರು ನಾಗಚೈತನ್ಯರಿಂದ ಡಿವೋರ್ಸ್​ ಪಡೆದುಕೊಂಡ ಬಳಿಕ ಸಿನಿಮಾ ಕಡೆ ಬಿಜಿಯಾಗಿದ್ದಾರೆ. ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಸರಣಿ “ಸಿಟಾಡೆಲ್ ಹನಿ ಬನ್ನಿ” ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಗುತ್ತಿದೆ. ಬಾಲಿವುಡ್ ನಟ ವರುಣ್ ಧವನ್ ಜತೆ ನಟಿಸಿದ್ದಾರೆ. ಈ ಸರಣಿಯು ಹಾಲಿವುಡ್ ವೆಬ್ ಸರಣಿ ಸಿಟಾಡೆಲ್‌ನ ರೀಮೇಕ್ ಆಗಿದೆ. ಇದರ ಹೊರತಾಗಿ ಮತ್ತೊಂದೆಡೆ ಅಗ್ರ ಒಟಿಟಿ ಕಂಪನಿ ನೆಟ್‌ಫ್ಲಿಕ್ಸ್‌ನೊಂದಿಗೆ “ರಕ್ತ ಬ್ರಹ್ಮಾಂಡ” ಎಂಬ ಸರಣಿಯಲ್ಲಿ ಸಮಂತಾ ನಟಿಸಲಿದ್ದಾರೆ. ಈ ಸರಣಿಯನ್ನು “ತುಂಬದ್” ಖ್ಯಾತಿಯ ನಿರ್ದೇಶಕ ಅನಿಲ್ ರಾಹಿ ಬರ್ವೆ ನಿರ್ದೇಶಿಸಿದ್ದಾರೆ. ಇದರಲ್ಲೂ ಸಮಂತಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net