ಒಬ್ಬಂಟಿಯಾಗಿಲ್ಲ ಎಂಬುದು ನೆನಪಿರಲಿ… ಸಮಂತಾ ಹಾರ್ಟ್​ ಬ್ರೇಕ್ ಪೋಸ್ಟ್​ ವೈರಲ್​!

ಹೈದರಾಬಾದ್​: ನಟ ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲರ ಹೆಸರು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಟ್ರೆಂಡ್ ಆಗಿದೆ. ಕೆಲ ದಿನಗಳಿಂದ ನಾಗಚೈತನ್ಯ-ಶೋಭಿತಾ ಪ್ರೀತಿ ಮಾಡುತ್ತಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಅಲ್ಲದೆ, ಇವರಿಬ್ಬರೂ ಜೊತೆಯಾಗಿ ಹಲವು ಬಾರಿ ವಿದೇಶ ಪ್ರವಾಸ ಕೂಡ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಚೈತನ್ಯ ಆಗಲಿ ಶೋಭಿತಾ ಆಗಲಿ ತಮ್ಮ ಪ್ರೀತಿಯ ಬಗ್ಗೆ ಒಮ್ಮೆಯೂ ಬಾಯ್ಬಿಟ್ಟಿರಲಿಲ್ಲ. ಆದರೆ, ಇಂದು ಈ ಪ್ರೇಮ ಪಕ್ಷಿಗಳು ನಿಶ್ಚಿತಾರ್ಥ ಮಾಡಿಕೊಂಡು ವದಂತಿಗಳಿಗೆ ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.

ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಂದು (ಆಗಸ್ಟ್ 8 ಗುರುವಾರ) ಬೆಳಗ್ಗೆ 9.42ಕ್ಕೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ಇವರಿಬ್ಬರ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲವು ಸೆಲೆಬ್ರಿಟಿಗಳು ಈ ಜೋಡಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸುತ್ತಿದ್ದಾರೆ. ಇದರ ನಡುವೆ ಸಮಂತಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಾರ್ಟ್ ಬ್ರೇಕ್ ಸಿಂಬಲ್ ಇರುವ ಪೋಸ್ಟ್ ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ, ಇಲ್ಲೊಂದು ಟ್ವಿಸ್ಟ್​ ಇದೆ.

ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ ಆದಾಗಿನಿಂದ ಎಲ್ಲರ ಕಣ್ಣು ಈ ಜೋಡಿಯ ಮೇಲಷ್ಟೇ ಅಲ್ಲ, ಸಮಂತಾ ಮೇಲೂ ನೆಟ್ಟಿದೆ. ಏಕೆಂದರೆ, ಈ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದ ಇಬ್ಬರು ದೂರಾಗಿದ್ದಾರೆ. ಇದೀಗ ತಮ್ಮ ಮಾಜಿ ಪತಿ ಬೇರೊಬ್ಬ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದರಿಂದ, ನೆಟ್ಟಿಗರು ಮತ್ತು ಅಭಿಮಾನಿಗಳು ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಏನನ್ನಾದರೂ ಪ್ರತಿಕ್ರಿಯೆ ನೀಡುತ್ತಾರೋ ಎಂದು ಹುಡುಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಮಂತಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಾರ್ಟ್ ಬ್ರೇಕ್ ಸಿಂಬಲ್ ಇರುವ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಆದರೆ, ವಾಸ್ತವವಾಗಿ ಸಮಂತಾ ಪೋಸ್ಟ್ ಮಾಡಿರುವುದು ಅವರ ನಿಶ್ಚಿತಾರ್ಥದ ಬಗ್ಗೆ ಅಲ್ಲ. ಕೇವಲ 100 ಗ್ರಾಂ ತೂಕ ಇದ್ದ ಕಾರಣ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆಲ್ಲುವ ಅವಕಾಶ ಕಳೆದುಕೊಂಡಿರುವ ವಿನೇಶ್ ಬಗ್ಗೆ. ವಿನೇಶ್​ ಅವರು ನಿವೃತ್ತಿ ಘೋಷಿಸಿದ್ದು, ಇದನ್ನು ಉಲ್ಲೇಖಿಸಿ ಸಮಂತಾ ಹಾರ್ಟ್​ ಬ್ರೇಕ್​ ಸಿಂಬಲ್​ ಪೋಸ್ಟ್ ಮಾಡಿದ್ದಾರೆ.

Samantha

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದು ಗೊತ್ತೇ ಇದೆ. ಇದರೊಂದಿಗೆ ಇಡೀ ಭಾರತವೇ ಆಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದೆ. ಇದರ ಭಾಗವಾಗಿ ನಾಯಕಿ ಸಮಂತಾ ಕೂಡ ವಿನೇಶ್​ಗೆ ಪ್ರೋತ್ಸಾಹ ನೀಡುವ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಇದೀಗ ಸಮಂತಾ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಆ ಪೋಸ್ಟ್‌ನಲ್ಲಿ ಸಮಂತಾ, ಕೆಲವೊಮ್ಮೆ ಕಷ್ಟಪಡುವವರು ತುಂಬಾ ಕಷ್ಟಗಳನ್ನು ಎದುರಿಸುತ್ತಾರೆ. ನೀವು ಒಬ್ಬಂಟಿಯಾಗಿಲ್ಲ ಎಂಬುದನ್ನು ನೆನಪಿಡಿ. ಏಕೆಂದರೆ, ನೀವು ಹೆಚ್ಚು ಶಕ್ತಿಯಿಂದ ಹಿಂತಿರುಗುತ್ತೀರಿ. ನಿಮ್ಮ ಅದ್ಭುತ ಸಾಮರ್ಥ್ಯದಿಂದ ಅದೆಷ್ಟೋ ಕಷ್ಟಗಳನ್ನು ಮೆಟ್ಟಿ ನಿಂತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಮಂತಾ ಬರೆದುಕೊಂಡಿದ್ದಾರೆ. ಇದೀಗ ಈ ಪೋಸ್ಟ್ ವೈರಲ್ ಆಗಿದ್ದು, ನಿಶ್ಚಿತಾರ್ಥದ ಬಗ್ಗೆಯೂ ಏನಾದರೂ ಹೇಳುತ್ತಾರಾ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. (ಏಜೆನ್ಸೀಸ್​)

ಆಗಸ್ಟ್​ 8ಕ್ಕೂ ಸಮಂತಾಗೂ ಇದೆ ನಂಟು! ನಿಶ್ಚಿತಾರ್ಥದ ದಿನಾಂಕದಲ್ಲೂ ಸ್ಯಾಮ್​ಗೆ ಟಾಂಗ್​ ಕೊಟ್ರಾ ಚೈತನ್ಯ?

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…