

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಭಾಗಿತ್ವದಲ್ಲಿ ಪುತ್ತೂರು ತಾಲೂಕಿನ ಕುಡಿಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕುಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸಮರ್ಥ್ ಬಾಹುಬಲಿ ಯಲ್ಲಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಮಾರ್ಗದರ್ಶನದಲ್ಲಿ, ಮಾಧವ ಬಿ.ಕೆ., ಜಶ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಮುಖ್ಯಶಿಕ್ಷಕ ಸತೀಶ್ ಭಟ್ ಹಾಗೂ ಶಿಕ್ಷಕರು ಸಹಕರಿಸಿದ್ದರು.