More

    ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ; ಇಂದು ಸುಪ್ರೀಂ ಕೋರ್ಟ್ ತೀರ್ಪು

    ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿದೆ.

    ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್, ಹಿಮಾ ಕೊಹ್ಲಿ, ಪಿ.ಎಸ್​. ನರಸಿಂಹ ಅವರಿರುವ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಮಂಗಳವಾರ ತೀರ್ಪನ್ನು ಪ್ರಕಟಿಸಲಿದೆ.

    ಇದಕ್ಕೂ ಮುನ್ನ ಮೇ ತಿಂಗಳಲ್ಲಿ 10 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​ಗೆ 20 ಅರ್ಜಿಗಳು ಸಲ್ಲಿಕೆಯಾಗಿದ್ದು, ಇಂದು ತೀರ್ಪನ್ನು ನೀಡಲಿದೆ.

    ನಿಬಂಧನೆಗಳನ್ನು ಮರುವ್ಯಾಖ್ಯಾನಿಸಿ

    ಈ ಪ್ರಕರಣವು ಭಾರತದಲ್ಲಿ LGBT ಹಕ್ಕುಗಳಿಗೆ ನಿರ್ಣಾಯಕ ತಿರುವು ಎಂದು ಪರಿಗಣಿಸಲಾಗಿದೆ. 2018ರಲ್ಲಿ ಸಲಿಂಗ ವಿವಾಹವನ್ನು ಅಪರಾಧ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿದ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

    ಇದನ್ನೂ ಓದಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

    ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೋ, ಬೇಡವೋ ಎಂಬುದರ ಕುರಿತು ಸುಪ್ರೀಂ ಕೋರ್ಟ್ 40 ಮಂದಿ ಉನ್ನತ ವಕೀಲರಿಂದ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಮತ್ತು 1954 ರ ನಿಬಂಧನೆಗಳನ್ನು ಮರುವ್ಯಾಖ್ಯಾನಿಸುವಂತೆ ಅರ್ಜಿದಾರರು ಸುಪ್ರೀಂ ಕೋರ್ಟ್​ಗೆ ಆಗ್ರಹಿಸಿದ್ಧಾರೆ.

    ರಾಜ್ಯಗಳು ಬಲವಾಗಿ ವಿರೋಧಿಸಿವೆ

    ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಇದು ದೇಶದ ಸಾಂಸ್ಕೃತಿಕ ಮತ್ತು ನೈತಿಕ ಸಂಪ್ರದಾಯಕ್ಕೆ ವಿರುದ್ಧವಾಗಿರುವುದಲ್ಲದೆ, ಮಾನ್ಯತೆ ನೀಡುವ ಮೊದಲು 28 ಕಾನೂನುಗಳ 158 ನಿಬಂಧನೆಗಳಲ್ಲಿ ಬದಲಾವಣೆ ಮಾಡುವ ಮೂಲಕ ವೈಯಕ್ತಿಕ ಕಾನೂನನ್ನು ಸಹ ತಿದ್ದಬೇಕಾಗುತ್ತದೆ.

    ಬ್ಯಾಂಕಿಂಗ್, ವಿಮೆ ಮುಂತಾದ ಕ್ಷೇತ್ರಗಳಲ್ಲಿ ಸಲಿಂಗ ದಂಪತಿಗಳು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುವ ಆಡಳಿತಾತ್ಮಕ ಕ್ರಮಗಳನ್ನು ಪರಿಗಣಿಸಲು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲು ಸಿದ್ಧವಾಗಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದರ ಕುರಿತು ಏಳು ರಾಜ್ಯಗಳ ಸರ್ಕಾರಗಳಿಂದ ಪ್ರತಿಕ್ರಿಯೆಯನ್ನು ಪಡೆಯಲಾಗಿದ್ದು ರಾಜಸ್ಥಾನ, ಆಂಧ್ರಪ್ರದೇಶ, ಅಸ್ಸಾಂ ಇದನ್ನು ಬಲವಾಗಿ ವಿರೋಧಿಸಿವೆ ಎಂದು ಕೇಂದ್ರ ಸರ್ಕಾರ ವಾದ ಮಂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts