More

    ಹೊಲಿಗೆ ತರಬೇತಿಯಿಂದ ಸ್ವಾವಲಂಬಿ ಬದುಕು

    ಕಟ್ಟೆಮಳಲವಾಡಿ: ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹೊಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದು ಕೈಗಾರಿಕಾ ಸಂಸ್ಥೆಯ ಅಧಿಕಾರಿ ಅಶ್ವಿನಿ ತಿಳಿಸಿದರು.

    ಕಟ್ಟೆಮಳಲವಾಡಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮೃದ್ಧಿ ಮಹಿಳಾ ಕೌಶಲ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರ ಸಾಕಷ್ಟು ಸೌಲಭ್ಯ ಕೊಡುತ್ತಿದ್ದರೂ ಗೊತ್ತಿರುವವರೇ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರಿಯಾದ ಮಾಹಿತಿ ಪಡೆದು ಸರ್ಕಾರದ ಸವಲತ್ತು ಬಳಸಿಕೊಂಡು ಹೆಚ್ಚಿನ ತರಬೇತಿ ಪಡೆದು ಸ್ವಂತ ಬದುಕು ಕಟ್ಟಿಕೊಳ್ಳಲು ಮಹಿಳೆಯರು ಮುಂದಾಗಬೇಕು ಎಂದು ತಿಳಿ ಹೇಳಿದರು.

    ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹದೇವ್, ಸಮೃದ್ಧಿ ಮಹಿಳಾ ಕೌಶಲ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷೆ ಮಹದೇವಮ್ಮ, ಗಿರಿಜಮ್ಮ, ತರಬೇತಿ ಶಿಕ್ಷಕಿ ರೇಷ್ಮಾಬಾನು, ಪವಿತ್ರಾ ಮುಂತಾದವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts