More

    ಸ್ಯಾಮ್ಸನ್​ ಶತಕಕ್ಕೆ ಬೆಚ್ಚಿದ ಹರಿಣಗಳು; ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆದ್ದು ಇತಿಹಾಸ ಬರೆದ ಭಾರತ

    ಪಾರ್ಲ್​: ಇಲ್ಲಿನ ಬೊಲ್ಯಾಂಡ್​ ಪಾರ್ಕ್​ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಹರಿಣಗಳ ವಿರುದ್ಧ ಟೀಂ ಇಂಡಿಯಾ ಜಯಗಳಿಸಿದೆ. ಈ ಮೂಲಕ ಭಾರತ ಕ್ರಿಕೆಟ್​ ತಂಡ ಹೊಸ ದಾಖಲೆ ಒಂದನ್ನು ಬರೆದಿದೆ.

    ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ತಂಡ ವಿಕೆಟ್​ ಕೀಪರ್​, ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್​ (108 ರನ್, 114 ಎಸೆತ, 6 ಬೌಂಡರಿ, 3 ಸಿಕ್ಸರ್​), ತಿಲಕ್​ ವರ್ಮಾ (52 ರನ್, 77 ಎಸೆತ, 5 ಬೌಂಡರಿ, 1 ಸಿಕ್ಸರ್​) ಸ್ಫೋಟಕ ಬ್ಯಾಟಿಂಗ್​ ಫಲವಾಗಿ 50 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 296 ರನ್​ಗಳಿಸಿತ್ತು.

    ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್​ಗಳು ಟೋನಿ ಡೇ ಜೋರ್ಜಿ (81 ರನ್, 87 ಎಸೆತ, 6 ಬೌಂಡರಿ, 3 ಸಿಕ್ಸರ್) ದಿಟ್ಟ ಪ್ರತಿರೋಧದ ಹೊರತಾಗಿಯೂ ಎದುರಾಳಿ ತಂಡವನ್ನು 45.5 ಓವರ್​ಗಳಲ್ಲಿ 218 ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ದಾಖಲೆ ಬರೆದಿದೆ.

    Team India

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts