

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ವೀವ್ ಇರುವ ಕಿರಿಕ್ ಪಾರ್ಟಿ ಸಿನಿಮಾದ ನಟಿ ಸಂಯುಕ್ತಾ ಹೆಗ್ಡೆ ಇದೀಗ ಡ್ಯಾನ್ಸ್ ಮಾಡುವ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿವೆ. ಸಂಯುಕ್ತಾ ಈ ಹಿಂದೆ ಸಾಕಷ್ಟು ಬಾರಿ ಹಾಟ್ & ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಸಂಯುಕ್ತಾ ಬಿಕಿನಿ ಅವತಾರದಲ್ಲಿ ಸೊಂಟ ಬಳುಕಿಸಿದ್ದಾರೆ.
ಸಂಯುಕ್ತಾ ಹೆಗ್ಡೆ ಸಿನಿಮಾದ ಫೈಟಿಂಗ್ ಚಿತ್ರೀಕರಣವೊಂದರ ಸಂದರ್ಭದಲ್ಲಿ ಗಾಯಗೊಂಡಿದ್ದರು. ಇದೀಗ ತಾನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ ಎಂದು ಹೇಳಲು ಬಿಕಿನಿ ಧರಿಸಿ ಡ್ಯಾನ್ ಮಾಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಡ್ಯಾನ್ಸ್ ಮಾಡಿರುವ ವಿಡಿಯೋ ಹಂಚಿಕೊಳ್ಳುವುದರ ಜತೆಗೆ ಸಂಯುಕ್ತಾ ಹೆಗ್ಡೆ, ಕಳೆದ ಮೂರು ತಿಂಗಳ ಬಳಿಕ ಮೊದಲ ಬಾರಿಗೆ ನಾನು ಡ್ಯಾನ್ಸ್ ಮಾಡುತ್ತಿದ್ದೇನೆ. ಈ ನನಗೆ ಇನ್ನಷ್ಟು ಹುರುಪು ನೀಡುತ್ತಿದೆ. ಫಿಸಿಯೋಥೆರಪಿಯ ಕಠಿಣ ಚಿಕಿತ್ಸೆ ಮುಗಿದಿದೆ. ಎಲ್ಲರಿಗೂ ಧನ್ಯವಾದಗಳು. ಇದೀಗ ನೀವು ನೋಡುತ್ತಿರುವುದು ಪರಿಪೂರ್ಣತೆಯಾ ಎಂದು ಪ್ರಶ್ನಿಸಿದ್ದಾರೆ.
ಫಿಸಿಯೋಥೆರಪಿ ಚಿಕಿತ್ಸೆಯ ಮೂರು ತಿಂಗಳ ಅವಧಿ ಧೈಹಿಕವಾಗಿ ಮತ್ತು ಮಾನಸಿಕವಾಗಿ ತೊಡಗಿಸಿಕೊಳ್ಳಲು ಕಷ್ಟಕರವಾಗಿತ್ತು. ಎಲ್ಲರ ಪ್ರೀತಿ ಮತ್ತು ಬೆಂಬಲದಿಂದ ಇದನ್ನು ಸಾಧಿಸಲು ಸಾಧ್ಯವಾಗಿದೆ. ದಿನನಿತ್ಯದ ಆಚರಣೆಯಂತೆ ಫಿಸಿಯೋಥೆರಪಿ ಚಿಕಿತ್ಸೆ ಮಾಡಿಸಿದರು. ಇದರಿಂದ ಬೇಗನೆ ಗುಣಮುಖವಾಗಲು ಸಾಧ್ಯವಾಯಿತು ಎಂದು ನಟಿ ಸಂಯುಕ್ತಾ ಹೆಗ್ಡೆ ಹೇಳಿಕೊಂಡಿದ್ದಾರೆ.