More

    ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ ಯಾರಿಂದಲೂ ಅಳಿಸಲು ಸಾಧ್ಯವಿಲ್ಲ: ಯೋಗಿ ಆದಿತ್ಯನಾಥ್​​

    ಲಖನೌ: ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮವಾಗಿದ್ದು, ಅಧಿಕಾರಕ್ಕಾಗಿ ಬದುಕಿರುವವರಿಂದ ಇದನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

    ಸನತಾನ ಧರ್ಮದ ಕುರಿತು ಡಿಎಂಕೆ ನಾಯಕರ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಭಾರತದಲ್ಲಿ ವಾಸಿಸುತ್ತಿರುವ ಕೆಲವರು ಆಕ್ರಮಣಕ್ಕೊಳಗಾಗಿರುವ ಸನಾತನ ಧರ್ಮವನ್ನು ಅವಮಾನಿಸುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದ್ದಾರೆ.

    ಸನಾತನ ಧರ್ಮ ದೇಶದ ರಾಷ್ಟ್ರೀಯ ಧರ್ಮವಾಗಿದ್ದು, ಅದನ್ನು ಯಾರಿಂದಲೂ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಪುರಾತನ ಕಾಲದಿಂದಲೂ ದಾಳಿಗೊಳಗಾಗಿರುವ ಸನಾತನ ಧರ್ಮದಂತೆಯೇ ದೇವರ ಅಸ್ತಿತ್ವವನ್ನು ಪ್ರಶ್ನಿಸಲಾಗುತ್ತಿದೆ. ದುರದೃಷ್ಕರ ಸಂಗತಿ ಏನೆಂದರೆ ಭಾರತದಲ್ಲಿ ವಾಸಿಸುತ್ತಿರುವ ಅನೇಕ ಜನರು ಸನಾತನ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ.

    ಇದನ್ನೂ ಓದಿ: ಸರ್ಕಾರ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವು ಜೊತೆ ನಿಲ್ಲುತ್ತೇವೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

    ಸನಾತನ ಧರ್ಮದ ವಿರುದ್ಧ ಮಾತನಾಡುವ ಮೂಲಕ ಅವರ ದೇಶದ ತತ್ವ, ಮೌಲ್ಯ ಹಾಗೂ ಆದರ್ಶಗಳನ್ನು ಅವಮಾನಿಸುತ್ತಿದ್ದಾರೆ. ಇಂತಹವರು ದೇಶದ ವಿರುದ್ಧ ಮಾತನಾಡಲು ಸಿಗುವ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳುವುದಿಲ್ಲ. ರಾವಣನು ಸಹ ದೇವರ ಅಸ್ತಿತ್ವವನ್ನು ಪ್ರಶ್ನಿಸಿದ. ಆದರೆ, ಅವರ ದುರಂಹಕಾರದಿಂದಲ್ಲೇ ಅವನು ಮೃತಪಟ್ಟನು.

    ಮೊಘಲ್​ ದೊರೆ ಬಾಬರ್​ ಅಯೋಧ್ಯೆಯಲ್ಲಿದ್ದ ರಾಮನ ದೇವಸ್ಥಾನವನ್ನು ಕೆಡವಿದ. 500 ವರ್ಷಗಳ ಬಳಿಕ ಇಂದು ರಾಮನಿಗಾಗಿ ಅಯೋಧ್ಯೆಯಲ್ಲಿ ಬೃಹತ್​ ದೇವಸ್ಥಾನವನ್ನು ನಿರ್ಮಾಣ ಮಾಡಲಾಗುತ್ತಿದೆ. ಹಿಂದೂ ಎಂಬುದು ಧಾರ್ಮಿಕ ಪದವಲ್ಲ. ಅದು ಭಾರತೀಯರ ಪಾಲಿನ ಸಾಂಸ್ಕೃತಿಕ ಗುರುತಾಗಿದೆ. ಸನಾತನ ಧರ್ಮವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖದಯಮಂತ್ರಿ ಯೋಗಿ ಆದಿತ್ಯನಾಥ್​​ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts