More

    ೨ ಸಾವಿರ ರೂ.ಗೆ ಮರಳು ಒದಗಿಸಲಿ ಶಾಸಕ ಯು.ಟಿ.ಖಾದರ್ ಒತ್ತಾಯ

    ಮಂಗಳೂರು: ಮರಳು ಇಲ್ಲದೆ ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದ್ದು, ಸಂಸದ ನಳಿನ್‌ಕುಮಾರ್ ಕಟೀಲ್ ತಿಂಗಳ ಹಿಂದೆ ನೀಡಿರುವ ಭರವಸೆಯಂತೆ ಶೀಘ್ರ ೨ ಸಾವಿರ ರೂ.ಗೆ ಮರಳು ಒದಗಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

    ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಾಗುತ್ತಾ ಬಂದಿದೆ. ಮನೆ ಸಹಿತ ಕಟ್ಟಡಗಳ ನಿರ್ಮಾಣಕ್ಕೆ ಮರಳು ಪೂರೈಕೆಯ ವ್ಯವಸ್ಥೆ ಮಾಡಬೇಕಿತ್ತು. ಆದರೆ ಬಿಜೆಪಿ ಜನಪ್ರತಿನಿಧಿಗಳು ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸಬೇಕು ಎಂದು ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿ ಏನು, ಕರ್ನಾಟಕದಿಂದ ಹೊರತಾಗಿದೆಯೇ? ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವರು ಮರಳುಗಾರಿಕೆ ಪುನರಾರಂಭಿಸುವುದಕ್ಕೆ ಸಂಬಂಧಿಸಿ ಸಭೆ ಕರೆಯಬೇಕು ಮತ್ತು ಶೀಘ್ರ ಜನಸಾಮಾನ್ಯರಿಗೆ ಮರಳು ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್, ಟಿ.ಕೆ.ಸುಧೀರ್, ಶುಭೋದಯ ಆಳ್ವ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts