28.5 C
Bengaluru
Monday, January 20, 2020

2 ವಾರದಲ್ಲಿ ಮರಳುಗಾರಿಕೆ ಆರಂಭ:ಶಾಸಕ ರಘುಪತಿ ಭಟ್

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಉಡುಪಿ: ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಎಲ್ಲ ಶಾಸಕರು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಭೇಟಿ ಮಾಡಿ, ಸೆ.15ರೊಳಗೆ ಏಳು ಸದಸ್ಯರ ಸಮಿತಿ ಸಭೆ ನಡೆಸಿ ಹಿಂದಿನ ಪದ್ಧತಿಯಲ್ಲಿ ಎಫ್‌ಐಆರ್ ಆಗಿರುವವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಪರವಾನಗಿ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ವಹಿವಾಟು ನಡೆಸಲು ಮೂರು ತಿಂಗಳ ಸಮಯಾವಕಾಶ ಕೇಳಲಾಗಿದೆ. ಇದಕ್ಕೆ ಗಣಿ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಸಮ್ಮತಿ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ದರ ನಿಗದಿ ಮಾಡಲಾಗುವುದು. ಈಗಾಗಲೇ 8.7 ಲಕ್ಷ ಮೆಟ್ರಿಕ್ ಟನ್ ಮರಳು ಗುರುತಿಸಲಾಗಿದ್ದು, 3 ಯುನಿಟ್ 5,500 ರೂ.ನಂತೆ ಮರಳು ಜನರಿಗೆ ಲಭಿಸುವ ಸಾಧ್ಯತೆ ಇದೆ. ಅ.15ರಿಂದ ನಾನ್-ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಪ್ರಾರಂಭ ಮಾಡಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಇಬ್ಬರು ಗುತ್ತಿಗೆದಾರರು ಅರ್ಹತೆ ಪಡೆದಿದ್ದು, ಉಳಿದ ಒಂಬತ್ತು ಕಡೆಗಳಲ್ಲಿ ಷರತ್ತುಗಳನ್ನು ಸರಳೀಕರಣಗೊಳಿಸಲು ಸಲಹೆ ನೀಡಲಾಗಿದೆ ಎಂದರು.
ಕುಂದಾಪುರ-ಬೈಂದೂರಿನಲ್ಲಿ ಇಕೋ ಸೆನ್ಸಿಟಿವ್ ರೆನ್ ಎಂದು ಗುರುತಿಸಲಾಗಿದ್ದು, ಇಲ್ಲಿ ಮರಳು ದಿಬ್ಬ ತೆರವು ಮಾಡಲು ಅನುಮತಿಗಾಗಿ ಜಿಲ್ಲಾಧಿಕಾರಿ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಕಾನೂನು ಬದ್ಧವಾಗಿ ಮರಳುದಿಬ್ಬ ತೆರವುಗೊಳಿಸುತ್ತಿರುವುದರಿಂದ ಎನ್‌ಜಿಟಿ ತಡೆಯಾಜ್ಞೆ ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸೆ.14ರ ನಂತರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು. ನಗರಸಭಾ ಸದಸ್ಯ ಪ್ರಭಾಕರ್ ಪೂಜಾರಿ, ಗಿರಿಧರ್ ಆಚಾರ್ಯ, ಪ್ರದೀಪ್ ರಾವ್ ಉಪಸ್ಥಿತರಿದ್ದರು.

ಪ್ರಮೋದ್‌ಗೆ ಗೇಟ್ ಓಪನ್: ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದು ಜೆಡಿಎಸ್ ಸದಸ್ಯತ್ವ ಪಡೆದಿರುವುದು ಈಗ ರಾಜೀನಾಮೆಯಿಂದ ಖಾತ್ರಿಯಾಗಿದೆ. ಪ್ರಮೋದ್ ನಮ್ಮ ಪಕ್ಷದಲ್ಲಿ ಇಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಹೀಗಾಗಿ ಇನ್ನು ಯಾವ ಪಕ್ಷಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು. ಬಿಜೆಪಿ ಗೇಟ್ ಓಪನ್ ಇದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ನನ್ನ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ
ಭಟ್‌ಗೆ ಪ್ರಮೋದ್ ತಿರುಗೇಟು: ಉಡುಪಿ: ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ಕ್ಷೇತ್ರದ ಜನತೆ ಬಗ್ಗೆ ಗಮನಹರಿಸಲಿ ಎಂದು ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ. ಸುಳ್ಳು ಹೇಳಿ ಹಿಂದುತ್ವದ ಹೆಸರಿನಲ್ಲಿ ಚುನಾವಣೆ ಗೆದ್ದಿದ್ದು, ಮರಳು ಸಮಸ್ಯೆ ಪರಿಹಾರ ಸಹಿತ ಆಶ್ವಾಸನೆಗಳನ್ನು ಈಡೇರಿಸಿಲ್ಲ. ನಾನು ಉಡುಪಿಗೆ ಮಂಜೂರು ಮಾಡಿದ ಕಾಮಗಾರಿಗಳೇ ಮುಂದುವರಿಯುತ್ತಿವೆ ಹೊರತು ಹೊಸ ಕಾಮಗಾರಿಗಳು ಬಂದಿಲ್ಲ ಎಂದು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...