ಭೀಮಾ ನದಿ ತೀರದ ಅಕ್ರಮ ಮರಳು ದಂಧೆ ಮೇಲೆ ದಾಳಿ!

sand mafia
Published on

ವಿಜಯಪುರ: ಭೀಮಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದು ಅಕ್ರಮ ಮರಳು ಅಡ್ಡೆ ಮೇಲೆ ದಾಳಿ, ಮರಳು ಜಪ್ತಿ ಮಾಡಲಾಗಿದೆ.

ಇಂಡಿ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮರಳು ಜಪ್ತಿ‌ ಮಾಡಲಾಗಿದೆ.

ಜಮೀನು ಹಾಗೂ ಮನೆ ಮುಂಭಾಗದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿದ್ದ ಅಕ್ರಮ ಮರಳು ದಂಧೆಕೋರರಿಗೆ ಎಚ್ಚರಿಕೆ ನೀಡಲಾಗಿದೆ. ದಾಳಿಯ ವೇಳೆ ತಹಶೀಲ್ದಾರ್ ಸಿದ್ದಯ್ಯ ಹಿರೇಮಠ, ಸಿಪಿಐ ಮಹಾದೇವ ಶಿರಹಟ್ಟಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸಾಥ್ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net