

ಬೆಂಗಳೂರು: ಸ್ಯಾಂಡಲ್ವುಡ್ನ ಪೋಷಕ ನಟ ರಾಕ್ಲೈನ್ ಸುಧಾಕರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಸ್ಯಾಂಡಲ್ವುಡ್ ಚಿತ್ರೋದ್ಯಮ ಸಂತಾಪ ಸೂಚಿಸಿದೆ. ಇಂದು ಬೆಳಿಗ್ಗೆ ಶುಗರ್ಲೆಸ್ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದ ರಾಕ್ಲೈನ್ ಸುಧಾಕರ್, ಹಾಸ್ಯಕಲಾವಿದರಾಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಪಂಚರಂಗಿ, ಪರಮಾತ್ಮ, ಟೋಪಿವಾಲಾ, ಅಧ್ಯಕ್ಷ, ಲವ್ ಇನ್ ಮಂಡ್ಯ, ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ, ವಾಸ್ತುಪ್ರಕಾರ, ಕರ್ವ, ಜೂಮ್ ಸೇರಿ 20ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.