ಪ್ರೀತಿಸಿ ಮದುವೆಯಾಗಿ ಸಹ ನಟನಿಂದ ವಂಚನೆ: ನಟಿಯಿಂದ ಆರೋಪ

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ವಂಚನೆ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ಸಹ ನಟನಿಂದ ವಂಚನೆಯಾಗಿದೆ ಎಂದು ನಟಿಯೊಬ್ಬರು ಆರೋಪಿಸಿದ್ದಾರೆ.

ನಮಿತ್​ ಐ ಲವ್ ಯು ಚಿತ್ರೀಕರಣದ ವೇಳೆ ಸಹ ನಟ ಅಮಿತ್​ ಹಾಗೂ ಸಹ ನಟಿಯ ನಡುವೆ ಪ್ರೇಮಾಂಕುರವಾಗಿತ್ತು. ಬಳಿಕ ಇಬ್ಬರೂ ವಿವಾಹವಾಗಿದ್ದರು. ಅಮಿತ್ ಕುಟುಂಬಸ್ಥರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ನನ್ನನ್ನು ದೂರ ಮಾಡಿದ್ದಾನೆ ಎಂದು ಆರೋಪಿಸಿ ನಟಿ, ಅಮಿತ್​​ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ನಟ ಅಮಿತ್ ಕೂಡ ಪದೇ ಪದೇ ನನಗೆ ಕಿರುಕುಳ ನೀಡುತ್ತಿದ್ದಾರೆಂದು ನಟಿಯ ವಿರುದ್ಧ ಪ್ರತಿ ದೂರು ಸಲ್ಲಿಸಿದ್ದಾರೆ. ಎರಡೂ ದೂರನ್ನು ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *