21.4 C
Bangalore
Wednesday, November 13, 2019

ಎಮರ್ಜೆನ್ಸಿ ಆಸ್ಪತ್ರೆ ಆಂದೋಲನಕ್ಕೆ ಸೆಲೆಬ್ರಿಟಿಗಳ ಸಾಥ್: ಕೊಡಗು ಜನತೆಯ ಪರ ನಿಂತ ಕನ್ನಡ ಚಿತ್ರರಂಗ

Latest News

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹೇಳಿಕೆಗೆ ಆಕ್ರೋಶ

ಗಂಗಾವತಿ: ಸಂವಿಧಾನ ರಚನೆ ಕುರಿತು ವಿವಾದಾತ್ಮಾಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ...

ಕೂಲಿ ಲೈನ್ ವಾಸಿಗಳಿಗೆ ನಿವೇಶನ ಕಲ್ಪಿಸಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪರಿಶಿಷ್ಟ ಪಂಗಡ ಮತ್ತು ಜಾತಿಗೆ ಸೇರಿದ ಕಾಫಿ ತೋಟಗಳ ಲೈನ್​ವುನೆ, ಬಾಡಿಗೆ ಮನೆ ನಿವಾಸಿಗಳಿಗೆ ಮನೆ ನಿವೇಶನ ಹಾಗೂ...

ಶಾರದಾ ಪೀಠದಲ್ಲಿ ಲಕ್ಷ ದೀಪೋತ್ಸವ

ಶೃಂಗೇರಿ: ಕಾರ್ತಿಕ ಹುಣ್ಣಿಮೆ ಅಂಗವಾಗಿ ಮಂಗಳವಾರ ಶ್ರೀಮಠದಲ್ಲಿ ಲಕ್ಷದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಸಾಂಪ್ರದಾಯಿಕ ಪೂಜೆ, ಶ್ರೀ ರುದ್ರಯಾಗದ ಪೂರ್ಣಾಹುತಿ ಮತ್ತಿತರೆ ಧಾರ್ವಿುಕ ಕಾರ್ಯಕ್ರಮಗಳು...

ಜನವರಿಗೆ ಸೊಲ್ಲಾಪುರದಲ್ಲಿ ಗುರು ಸಿದ್ಧರಾಮ ಜಯಂತಿ

ಅಜ್ಜಂಪುರ: ಜನವರಿಯಲ್ಲಿ ಸೊಲ್ಲಾಪುರದಲ್ಲಿ ನಡೆಯಲಿರುವ ಕರ್ಮಯೋಗಿ ಗುರು ಸಿದ್ಧರಾಮ ಶಿವಯೋಗಿಗಳ ಜಯಂತ್ಯುತ್ಸವಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ...

ಬಿಸಿಯೂಟ ನೌಕರರ ಧರಣಿ ಅಂತ್ಯ

ಮಂಡ್ಯ: ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಬಿಸಿಯೂಟದ ಟೆಂಡರನ್ನು ಇಸ್ಕಾನ್ ಸಂಸ್ಥೆಗೆ ಕೊಟ್ಟಿರುವುದನ್ನು ವಿರೋಧಿಸಿ ನಗರದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ...

ಬೆಂಗಳೂರು: ಯಾವುದೇ ಸಾಮಾಜಿಕ ಸಮಸ್ಯೆಗಳು ಎದುರಾದಾಗಲೂ ಸ್ಪಂದಿಸುತ್ತಾರೆ ಸೆಲೆಬ್ರಿಟಿಗಳು. ಕಾವೇರಿ ವಿವಾದ, ಪ್ರವಾಹ, ಬರ ಮುಂತಾದ ಸಂದರ್ಭಗಳಲ್ಲಿ ಚಂದನವನದ ತಾರೆಯರು ಜನಪರವಾಗಿ ನಿಂತ ಹಲವು ಉದಾಹರಣೆಗಳಿವೆ. ಈಗ ಅಂಥದ್ದೇ ಒಂದು ಸಮಾಜಮುಖಿ ಕಾರ್ಯಕ್ಕಾಗಿ ಕನ್ನಡ ಚಿತ್ರರಂಗದ ಕಲಾವಿದರು ಧ್ವನಿ ಎತ್ತುತ್ತಿದ್ದಾರೆ. ಕೊಡಗಿನಲ್ಲಿ ಸುಸಜ್ಜಿತ ಎಮರ್ಜೆನ್ಸಿ ಆಸ್ಪತ್ರೆ ಬೇಕು ಎಂಬ ಬೇಡಿಕೆ ಕೇಳಿಬರುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಅದಕ್ಕೆ ಸೆಲೆಬ್ರಿಟಿಗಳು ಕೂಡ ಸಾಥ್ ನೀಡುತ್ತಿರುವುದು ವಿಶೇಷ. ಶಿವರಾಜ್​ಕುಮಾರ್, ‘ಕಿಚ್ಚ’ ಸುದೀಪ್, ರಶ್ಮಿಕಾ ಮಂದಣ್ಣ, ಹರ್ಷಿಕಾ ಪೂಣಚ್ಚ ಮುಂತಾದವರು ಈ ಅಭಿಯಾನಕ್ಕೆ ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಕೂಗು ಕೇಳಿಬಂತು. ಸಾಮಾಜಿಕ ಜಾಲತಾಣದಲ್ಲಿ ಜನರು ನಡೆಸಿದ ಅಭಿಯಾನ ಮುಖ್ಯಮಂತ್ರಿ ಕುಮಾರಸ್ವಾಮಿ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ‘ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಈಗ ಅದೇ ರೀತಿ ಕೊಡಗಿನ ಜನರು ಸಹ ಆಸ್ಪತ್ರೆಗಾಗಿ ಬೇಡಿಕೆ ಇಡುತ್ತಿದ್ದಾರೆ. ಆರೋಗ್ಯ ಸಮಸ್ಯೆ ಎದುರಾದರೆ ಕೊಡಗಿನ ಜನರು ಚಿಕಿತ್ಸೆಗಾಗಿ ಮೈಸೂರು ಅಥವಾ ಮಂಗಳೂರಿಗೆ ಬರಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಸರ್ಕಾರದ ವತಿಯಿಂದ ಎಮರ್ಜೆನ್ಸಿ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಮೂಲತಃ ಕೊಡಗಿನವರಾದ ನಟಿ ಹರ್ಷಿಕಾ ಪೂಣಚ್ಚ, ‘ಇತ್ತೀಚೆಗೆ ನಮ್ಮ ತಂದೆಗೆ ಆರೋಗ್ಯ ಸಮಸ್ಯೆ ಎದುರಾಯಿತು. ನಾನು ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬರಬೇಕಾಯಿತು. ಯಾಕೆಂದರೆ ಕೊಡಗಿನಲ್ಲಿ ಯಾವುದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಈ ಪರಿಸ್ಥಿತಿ ಯಾರಿಗೂ ಎದುರಾಗಬಾರದು. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆ ಇದೆ. ಕೊಡಗಿಗೆ ಎಮರ್ಜೆನ್ಸಿ ಆಸ್ಪತ್ರೆ ಬೇಕೇ ಬೇಕು’ ಎಂದಿದ್ದಾರೆ.

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಕೂಡ ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ‘ಕೊಡಗು ಯಾವಾಗಲೂ ಕರ್ನಾಟಕಕ್ಕೆ ಸೇರಿದ್ದು. ದೇಶ ಕಾಯಲು ಸಾಕಷ್ಟು ಯೋಧರು ಕೊಡಗಿನಿಂದ ಹೋಗಿದ್ದಾರೆ. ಅಲ್ಲಿನ ಜನತೆಗೆ ಆಸ್ಪತ್ರೆ ಸೌಕರ್ಯ ಕಡಿಮೆ ಎಂಬುದು ಗೊತ್ತಾಗಿದೆ. ಯಾರೂ ನೊಂದುಕೊಳ್ಳಬೇಕಿಲ್ಲ. ನಾವೆಲ್ಲ ನಿಮ್ಮ ಜತೆಗೆ ಇದ್ದೇವೆ. ಇಡೀ ಚಿತ್ರರಂಗದ ಪರವಾಗಿ ಸರ್ಕಾರಕ್ಕೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಆಸ್ಪತ್ರೆ ಎಂಬುದು ಮೂಲಭೂತ ಅಗತ್ಯ. ಎಲ್ಲ ಹಳ್ಳಿ, ಊರುಗಳಲ್ಲಿ ಆ ಸೌಕರ್ಯ ಇರಲೇಬೇಕು. ಎಲ್ಲ ಸೌಲಭ್ಯಗಳಿರುವ ಆಸ್ಪತ್ರೆ ಆದಷ್ಟು ಬೇಗ ಕೊಡಗಿಗೆ ಬರಲಿ’ ಎಂದಿದ್ದಾರೆ ಶಿವರಾಜ್​ಕುಮಾರ್.

ಕೊಡಗಿನ ಮತ್ತೋರ್ವ ನಟಿ ರಶ್ಮಿಕಾ ಮಂದಣ್ಣ ಸಹ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ‘ಮೂಲಭೂತ ಅಗತ್ಯಗಳಲ್ಲಿ ಒಂದಾದ ಆಸ್ಪತ್ರೆ ನಮ್ಮ ಕೊಡಗಿನಲ್ಲಿ ಇಲ್ಲ. ಒಳ್ಳೆಯ ಆಸ್ಪತ್ರೆಗಾಗಿ ನಾವು ದೂರದ ನಗರಗಳಿಗೆ ಹೋಗಬೇಕಿದೆ. ಆದಷ್ಟು ಬೇಗ ಸಮಸ್ಯೆ ಪರಿಹಾರವಾದಲ್ಲಿ ಕೊಡಗಿನ ಜನರಿಗೆ ಅನುಕೂಲ ಆಗಲಿದೆ. ದಯವಿಟ್ಟು ಸ್ಪಂದಿಸಿ’ ಎಂದು ಮುಖ್ಯಮಂತ್ರಿಗಳಿಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ ರಶ್ಮಿಕಾ. ‘ಕೊಡಗಿನ ನನ್ನ ಅಭಿಮಾನಿಗಳು ಮತ್ತು ಅವರ ಕುಟುಂಬದವರಿಗಾಗಿ ನಾನು ಸದಾ ಇರುತ್ತೇನೆ. ನನ್ನ ಕೈಲಾದ್ದನ್ನು ಮಾಡುತ್ತೇನೆ. ಜನರಿಗೆ ನನ್ನ ಬೆಂಬಲ ಇದ್ದೇ ಇರುತ್ತದೆ’ ಎನ್ನುವ ಮೂಲಕ ಆಂದೋಲನಕ್ಕೆ ಸುದೀಪ್ ಕೈ ಜೋಡಿಸಿದ್ದಾರೆ.

- Advertisement -

Stay connected

278,453FansLike
559FollowersFollow
606,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...