Wednesday, 21st November 2018  

Vijayavani

ಕಬ್ಬು ಬೆಳೆಗಾರರ ಹೋರಾಟಕ್ಕೆ ಕೇಸರಿ ಬಲ - ರಾಜ್ಯಾದ್ಯಂತ ಇಂದು ಬಿಜೆಪಿ ಬೃಹತ್ ಪ್ರತಿಭಟನೆ        ಗದಗಿನ ಕದಡಿ ಬಳಿ ಒಡೆದ ಕಾಲುವೆ- ಜಮೀನುಗಳಿಗೆ ನುಗ್ಗಿದ ಅಪಾರ ನೀರು - ಅಧಿಕಾರಿಗಳ ವಿರುದ್ಧ ಆಕ್ರೋಶ        ದ್ರಾಕ್ಷಿ ತೋಟದಲ್ಲಿ ಕರೆಂಟೂ, ನೆಲದಲ್ಲೂ ಕರೆಂಟು - ಚಿಕ್ಕಬಳ್ಳಾಪುರದ ಪವರ್​ ಗ್ರಿಡ್ ಕಂಟಕ        ಮದ್ದೂರು ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ - ಒಬ್ಬ ಲ್ಯಾಬ್ ಟೆಕ್ನೀಷಿಯನ್ ಸ್ಥಿತಿ ಗಂಭೀರ-        ಸ್ಯಾಂಡಲ್​ವುಡ್​​ನಲ್ಲಿ ಮತ್ತೊಂದು ಗಟ್ಟಿಮೇಳ - ಡಿ.11, 12ರಂದು ಹಸೆಮಣೆ ಏರುತ್ತೆ ಐಂದ್ರಿತಾ, ದಿಗಂತ್ ಜೋಡಿ       
Breaking News

ಅನಾರೋಗ್ಯದಿಂದ ಸ್ಯಾಂಡಲ್‌ವುಡ್‌ ಹಾಸ್ಯನಟ ವಠಾರ ಮಲ್ಲೇಶ್‌ ಸಾವು

Friday, 06.07.2018, 11:18 AM       No Comments

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ ಹಾಸ್ಯನಟ ವಠಾರ ಮಲ್ಲೇಶ್​ ಮೃತಪಟ್ಟಿದ್ದಾರೆ.

ಕಿಡ್ನಿ ವೈಫಲ್ಯ, ಬ್ರೇನ್​ಸ್ಟ್ರೋಕ್​​ನಿಂದ ಬಳಲುತಿದ್ದ ಮಲ್ಲೇಶ್ ಬೆಂಗಳೂರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಕಾರಣದಿಂದಾಗಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ಬಂದಿದ್ದರು.

ಆದರೆ ಇಂದು ಬೆಳಗ್ಗೆ ಆನೇಕಲ್​​ನ ತಮ್ಮ ಸ್ವಗ್ರಾಮದಲ್ಲೇ ಮಲ್ಲೇಶ್ ಕೊನೆಯುಸಿರೆಳೆದಿದ್ದಾರೆ.

100ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಮಲ್ಲೇಶ್, ನಟ ದರ್ಶನ್‌ ಅವರ ಅಭಿಮಾನಿಯಾಗಿದ್ದರು. ಕೊನೆಯದಾಗಿ ದರ್ಶನ್‌ ನೋಡಲು ಇಚ್ಛಿಸಿದ್ದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top