

ಬೆಂಗಳೂರು: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ಮಾಡಿ, ಮನೆಯನ್ನು ಪರಿಶೀಲಿಸಿದೆ.
ಸಂಜನಾ ಆಪ್ತ ರಾಹುಲ್ ಹೇಳಿಕೆ ಆಧಾರದ ಮೇಲೆ ದಾಳಿ ಮಾಡಲಾಗಿತ್ತು. ಇದೀಗ ಮನೆಯ ಪರಿಶೀಲನೆ ಬಳಿಕ ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಸಿಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಫೋನ್ ಕೂಡ ಸೀಜ್ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್)