ಹೃದಯಾಘಾತದಿಂದ ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಂದೀಪ್​ ರಾಯ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಂದೀಪ್​ ರಾಯ್ (73) ಅವರು ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಹೃದಯಘಾತಕ್ಕೀಡಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಹೃದಯಾಘಾತದಿಂದಲೇ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಕಾವಲ್​ ಭೈರಸಂದ್ರದಲ್ಲಿರುವ ನಿವಾಸದಲ್ಲಿ ತಡರಾತ್ರಿ 1.45 ಸುಮಾರಿಗೆ ಹೃದಯಾಘಾತದಿಂದ ಮಂದೀಪ್​ ರಾಯ್​ ಅಸುನೀಗಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತದಿಂದ ಬಳಲಿದ್ದ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಬಳಿಕ ಡಿಸ್ಚಾರ್ಜ್​ ಆಗಿ ಮನೆಯಲ್ಲಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳ … Continue reading ಹೃದಯಾಘಾತದಿಂದ ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಂದೀಪ್​ ರಾಯ್ ವಿಧಿವಶ