ತಮ್ಮ ಅನುಕರಣೆ ಹಾಗೂ ಮಾತುಗಳು ವಿವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಣವೀರ್ ಸಿಂಗ್, ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಸ್ಪಷ್ಟನೆ ನೀಡಿದರು. ಈ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ಅಂತಹ ಪಾತ್ರಗಳನ್ನು ನಿರ್ವಹಿಸುವುದು ಎಷ್ಟು ಸವಾಲಿನದ್ದು ಎಂಬುದು ಓರ್ವ ನಟನಾಗಿ ನನಗೆ ಚೆನ್ನಾಗಿ ತಿಳಿದಿದೆ. ಹೀಗಾಗಿ, ರಿಷಬ್ ಅವರು ಅತ್ಯಂತ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದೇ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ರಣವೀರ್ ಬರೆದುಕೊಂಡಿದ್ದರು, (ಏಜೆನ್ಸೀಸ್).