ಅಂದಹಾಗೆ, ಟಾಕ್ಸಿಕ್ ಸಿನಿಮಾ ಜೂನ್ 4 ರಂದು ತೆರೆಕಾಣಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ್ ಹಾಗೂ ಯಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಶಿ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಿದ್ದು, ಈ ಚಿತ್ರವು ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.