ಡಿ.25ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದ 'ಮಾರ್ಕ್', ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆಯ ಜತೆಗೆ ಸಿನಿಪ್ರಿಯರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ. ಈಗಾಗಲೇ ಚಿತ್ರಕ್ಕೆ ಪೈರಸಿ ಕಾಟ ಹಾಗೂ ನೆಗೆಟಿವ್ ರಿವ್ಯೂವ್ ಸಮಸ್ಯೆಗಳು ಕಾಡುತ್ತಿವೆ. ಇದರ ಮಧ್ಯೆಯೇ, ಸುದೀಪ್ ಮಗಳಿಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಅಸಭ್ಯ ಕಮೆಂಟ್ ಹಾಕಿದ್ದಾರೆ. ಇದಕ್ಕೆ ಸಾನ್ವಿ ಕೂಡ ಮುಖಕ್ಕೆ ಹೊಡೆದಂತೆ ಉತ್ತರಿಸಿರುವುದು ಗಮನಾರ್ಹ.