More

    ಅತ್ಯಾಚಾರ ಸಾಬೀತು: ಸ್ಟಾರ್​ ಕ್ರಿಕೆಟಿಗನಿಗೆ 8 ವರ್ಷ ಜೈಲು!

    ಕಠ್ಮಂಡು(ನೇಪಾಳ): 18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಕೋರ್ಟ್​ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    ಇದನ್ನೂ ಓದಿ: ವಿದ್ಯಾರ್ಥಿಗೆ ಚಪ್ಪಲಿಯಿಂದ ಥಳಿಸಿ, ಬಾಯಿಗೆ ಮೂತ್ರ ಹೊಯ್ದರು! ಈ ಅಮಾನುಷ ಘಟನೆ ನಡೆದಿದ್ದಾದರೂ ಎಲ್ಲಿ?
    ವಿವರ ಇಲ್ಲಿದೆ..

    ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿದ್ದು, ಇದೀಗ 8 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ಶಿಶಿರ್ ರಾಜ್ ಧಾಕಲ್ ಬುಧವಾರ ವಿಚಾರಣೆ ನಂತರ 8 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

    2022ರಲ್ಲಿ ಲಾಮಿಚಾನೆ ಅವರು ವೆಸ್ಟ್​ ಇಂಡೀಸ್​ನಲ್ಲಿ ನಡೆಯುತ್ತಿದ್ದ ಕೆರಿಬಿಯನ್​ಕ್ರಿಕೆಟ್​ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು. ಆಗ ಅವರ ಮೇಲೆ ಅತ್ಯಾಚಾರದ ದೂರು ದಾಖಲಾಗಿದ್ದರೂ ತನಿಖೆಗೆ ಹಾಜರಾಗದ ಕಾರಣ ಅವರ ವಿರುದ್ಧ ಕೋರ್ಟ್​ ಜಾಮೀನುರಹಿತ ವಾರಂಟ್​ಹೊರಡಿಸಿತ್ತು. ಬಳಿಕ ಅವರು ತವರಿಗೆ ಮರಳಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಕ್ಕೆ ಪಡೆದು ಕೋರ್ಟ್​ಗೆ ಹಾಜರುಪಡಿಸಿದ್ದರು.

    ಕೆಳ ಹಂತದ ನ್ಯಾಯಾಲಯ ಲಾಮಿಚಾನೆಯನ್ನು ನ್ಯಾಯಾಂಗ ಬಂಧನದಲ್ಲಿ ಇಡುವಂತೆ ಆದೇಶಿಸಿತ್ತು. ಹೀಗಾಗಿ ಅವರು ಮೂರು ತಿಂಗಳು ಜೈಲಿನಲ್ಲಿದ್ದರು. ಆದೆ ಸಂದೀಪ್ ಮೇಲ್ಮನವಿ ಸಲ್ಲಿಸಿದ್ದರಿಂದ ಹೈಕೋರ್ಟ್​ಅವರಿಗೆ ಜಾಮೀನು ನೀಡಿತ್ತು.

    ಕಳೆದ ವರ್ಷ ಜ.12 ರಿಂದ ಲಾಮಿಚಾನೆ ಜಾಮೀನಿನ ಮೇಲೆ ಹೊರಬಂದಿದ್ದರು. ಅಲ್ಲದೆ ನೇಪಾಳ ಪರ ಕ್ರಿಕೆಟ್​ ಕೂಡ ಆಡುತ್ತಿದ್ದರು. ಇದೀಗ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಆದ ಕಾರಣ ಮುಂದೆ ಕ್ರಿಕೆಟ್​ ಆಡಲು ಸಾಧ್ಯವಾಗಲಿದೆಯೇ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

    2022ರಲ್ಲಿ ಲಾಮಿಚಾನೆ ವಿರುದ್ಧ ಹುಡುಗಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಈ ಆರೋಪದ ಬಳಿಕ ಲಾಮಿಚಾನೆ ಬಂಧನ ಕೂಡ ಆಗಿತ್ತು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಕ್ರಿಕೆಟಿಗನ ಮೇಲೆ ಆರೋಪ ಹೊರಿಸಲಾಗಿತ್ತು.

    ಐಪಿಎಲ್​ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಪರ ಆಡಿದ್ದ ಸಂದೀಪ್ ಲಮಿಚಾನೆ ಒಟ್ಟು 9 ಪಂದ್ಯಗಳನ್ನು ಆಡಿ 13 ವಿಕೆಟ್​ ಪಡೆದಿದ್ದಾರೆ. 2018 ಮತ್ತು 2019ರ ಆವೃತ್ತಿಯಲ್ಲಿ ಅವರು ಆಡಿದ್ದರು.

    ವಿಜಯಪುರದಲ್ಲಿ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು – ಬಸ್ ಬೆಂಕಿಗೆ ಆಹುತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts