More

    ಕಿರು ಉದ್ದಿಮೆದಾರರಿಗೆ ಮಾರುಕಟ್ಟೆ ಅಗತ್ಯ

    ಸಂಡೂರು: ಕಿರು ಉದ್ದಿಮೆದಾರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕಾಗಿದೆ. ತಾಲೂಕಿನಲ್ಲಿ ಸ್ವಸಹಾಯ ಸಂಘಗಳನ್ನು ಒಟ್ಟುಗೂಡಿಸಿ ಸಂಜೀವಿನಿ ಮಾಸಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು ಎಂದು ಸಂಜೀವಿನಿ ಕಾರ್ಯಕ್ರಮದ ವ್ಯವಸ್ಥಾಪಕ ಸೋಮಶೇಖರ್ ಹೇಳಿದರು.

    ತಾಲೂಕಿನ ವಡ್ಡು ಗ್ರಾಮದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಗ್ರಾಪಂ ಹಾಗೂ ಹಳ್ಳದರಾಯ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಾಲ ಸೌಲಭ್ಯ ಪಡೆದು ತಯಾರಿಸಿದ ಆಹಾರ, ಆಹಾರೇತರ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕಿದೆ. ಲಿಂಗತ್ವಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನದಡಿ ಲಿಂಗ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಲಾಗುವುದು ಎಂದರು.

    ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ನಾಗರತ್ನಮ್ಮ, ಗ್ರಾಪಂ ಉಪಾಧ್ಯಕ್ಷೆ ಪಾರ್ವತಿ, ವಲಯ ಮೇಲ್ವಿಚಾರಕ ರುದ್ರಪ್ಪ, ಪಾರ್ವತಮ್ಮ, ಎಂಬಿಕೆ ಉಷಾ, ಎಲ್‌ಆರ್‌ಸಿಪಿಗಳಾದ ಮಾಬನ್ನಿ, ಕುಸುಮಾ, ರಮಿಜಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts