ಸಂಡೂರು: ಪ್ರತಿಯೊಬ್ಬ ಮಹಿಳೆ ತನ್ನ ಶಕ್ತಿಯನ್ನು ಅರಿತುಕೊಂಡು, ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಮುಂದೆ ಬರಬೇಕು ಎಂದು ಕಟ್ಟಡ ಕಾರ್ಮಿಕ ಫೆಡರೇಷನ್ ತಾಲೂಕು ಅಧ್ಯಕ್ಷ ವಿ.ದೇವಣ್ಣ ಹೇಳಿದರು.
ಕುರೇಕುಪ್ಪದಲ್ಲಿ ಮಹಿಳಾ ದಿನ ಆಚರಣೆ ಉದ್ದೇಶಿಸಿ ಶನಿವಾರ ಮಾತನಾಡಿದರು. ರಾಜಕೀಯ, ಕೃಷಿ, ಕಲೆ, ಕ್ರೀಡೆ, ತಂತ್ರಜ್ಞಾನ, ಉದ್ದಿಮೆಗಳು ಸೇರಿ ಎಲ್ಲೆಲ್ಲೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಮಹಿಳೆಯರು ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಮಹಿಳೆಯರ ತಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಮಾಡಬೇಕು ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ಕೆ.ಕಲ್ಗುಡೆಪ್ಪ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ಇನ್ನು ಮಹಿಳೆಯರ ಮೀಸಲಾತಿ ಹಾಗೂ ಎಲ್ಲ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು ಎಂದರು.