More

    ಅಪೌಷ್ಟಿಕತೆಯಿಂದ ರಕ್ತಹೀನತೆ

    ಸಂಡೂರು: ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಫ್ಯಾನ್, ಫ್ರೀಜ್‌ನಂತಹ ಹೈಟೆಕ್ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಕುರೇಕುಪ್ಪ ಪುರಸಭೆ ಸದಸ್ಯ ಎಸ್.ಕೆ.ಮೆಹಬೂಬ್ ಬಾಷಾ ಹೇಳಿದರು.

    ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದ 11ನೇ ವಾರ್ಡ್‌ನ ಘೋರ್ಪಡೆ ನಗರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸಹಕಾರದಲ್ಲಿ ಪೌಷ್ಟಿಕ ಆಹಾರ ಶಿಬಿರ ಉದ್ದೇಶಿಸಿ ಮಾತನಾಡಿದರು.

    ಸಿಡಿಪಿಒ ಎಳೆ ನಾಗಪ್ಪ ಮಾತನಾಡಿ, ಸದೃಢ ಮಗು ಪಡೆಯಲು ಗರ್ಭಿಣಿಯರು ಉತ್ತಮ ಪೌಷ್ಟಿಕ ಆಹಾರ ಸೇವಿಸುವುದು ಅತೀ ಮುಖ್ಯ. ಸ್ಥಳೀಯವಾಗಿ ದೊರೆಯುವ ಎಲ್ಲಾ ತರಕಾರಿ, ಹಣ್ಣುಗಳನ್ನು ಸೇವಿಸಬೇಕು ಎಂದು ತಿಳಿಸಿದರು.

    ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಮಾತನಾಡಿ, ಅಪೌಷ್ಟಿಕತೆಯಿಂದ ರಕ್ತಹೀನತೆ ಉಂಟಾಗುತ್ತದೆ. ರಕ್ತಹೀನತೆಯಿಂದ ಮಕ್ಕಳಲ್ಲಿ ಅನಾರೋಗ್ಯ ಕಾಣಿಸಿಕೊಂಡು ಸಾವು ಸಂಭವಿಸುತ್ತದೆ. ಇದನ್ನು ತಪ್ಪಿಸಲು ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ತಿಳಿಸಿದರು.

    ಆರು ತಿಂಗಳ ಮಕ್ಕಳಿಗೆ ಅನ್ನ ಪ್ರಾಶನ ಮಾಡಲಾಯಿತು ಹಾಗೆ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆ ಮಾಬುನ್ನು, ಅರುಣ, ಶಾಲೆ ಪೂರ್ವ ಶಿಕ್ಷಣ ಅಧಿಕಾರಿ ಕೊಟ್ರಪ್ಪ, ನಾಗೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts