More

    ರಾಯಣ್ಣ-ಶಿವಾಜಿ ಪುತ್ಥಳಿ ಗಲಾಟೆ; ಸರ್ಕಾರಕ್ಕೆ ಸಲಹೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

    ಧಾರವಾಡ: ಬೆಳಗಾವಿಯ ಪೀರನವಾಡಿಯಲ್ಲಿ ಪುತ್ಥಳಿ ಗಲಾಟೆ ಸಂಬಂಧ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ ಇಬ್ಬರೂ ವೀರ ಯೋಧರು. ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ದೊಡ್ಡದು. ಅಂತಹ ವೀರ ಒಂದು ಕಡೆ. ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿದ ಶಿವಾಜಿ ಮಹಾರಾಜರು ಇನ್ನೊಂದು ಕಡೆ. ಇವರಿಬ್ಬರೂ ದೇಶದ ಹೆಮ್ಮೆ ಮತ್ತು ವಿಶ್ವಮಾನವರು. ಇಂಥವರ ವಿಷಯದಲ್ಲಿ ಪುತ್ಥಳಿ ರಾಜಕಾರಣ ಆಗಬಾರದು ಎಂದರು.

    ಇದನ್ನೂ ಓದಿರಿ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

    ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ ಇಬ್ಬರೂ ನಮ್ಮ ದೇಶದ ವೀರ ಪುತ್ರರು. ಪುತ್ಥಳಿ ಗಲಾಟೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು. ಸಂಬಂಧಿಸಿದವರು ಶಾಂತ ರೀತಿಯಿಂದ ಕುಳಿತು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಲಹೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಎಂಇಎಸ್ ಬಗ್ಗೆ ಯಾವಾಗಲೂ ವಿರೋಧಿಸುತ್ತ ಬಂದಿದ್ದೇನೆ. ಎಂಇಎಸ್‌ನ ಈ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು.

    ಕನ್ನಡಿಗರನ್ನು ಕೆಣಕಿದ ಮಹಾರಾಷ್ಟ್ರ ಪುಂಡರಿಗೆ ಲಾಠಿಏಟು!

    ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts