More

    ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ

    ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

    2023ರಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಯುವಕರು ಮತ್ತು ಗ್ರಾಮಸ್ಥರು ಪ್ರತಿಮೆ ನಿರ್ಮಿಸಿದ್ದರು. ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ಹಾನಿಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

    ಸರ್ವ ಸಮುದಾಯದ ನಾಯಕ ಮತ್ತು ಸ್ವಾತಂತ್ರೃಕ್ಕಾಗಿ ಹೋರಾಡಿದ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ದೂರ ದೃಷ್ಟಿಯಿಂದ ಅವರ ಪ್ರತಿಮೆಯನ್ನು ಗ್ರಾಮಸ್ಥರ ಸಹಕಾರದೊಂದಿಗೆ ಯುವಕರು ಒಂದು ವರ್ಷದ ಹಿಂದೆ ಪ್ರತಿಮೆ ನಿರ್ಮಿಸಿದ್ದರು. ಇದೀಗ ಆ ಪ್ರತಿಮೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ ಎಂದು ಗ್ರಾಮದ ಹಿರೇಗೌಡ ಕಿಡಿಕಾರಿದರು.

    ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರ ಪ್ರತಿಮೆಯನ್ನು ವಿಕೃತಿಗೊಳಿಸುವುದು ಎಷ್ಟು ಸರಿ? ಹಾಗಾಗಿ ದುಷ್ಕರ್ಮಿಗಳನ್ನು ಸರ್ಕಾರ ಶೀಘ್ರವೇ ಬಂಧಿಸಬೇಕು. ಈ ಮಹನೀಯ ಒಂದು ಸಮುದಾಯಕ್ಕೆ ಸೀಮಿತವಲ್ಲ. ಹಾಗಾಗಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಮೆ ಮುಂದೆ ಗ್ರಾಮಸ್ಥರು ಮತ್ತು ರಾಯಣ್ಣನ ಅಭಿಮಾನಿಗಳು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಬಿಕನಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts