ಮದ್ವೆ ಎಂಬುದು ಕಷ್ಟ ಡಿವೋರ್ಸ್ ಅಂದ್ರೆ​… ಸಾನಿಯಾ ಮಿರ್ಜಾ ನೋವಿನ ಮಾತು, ಮಲಿಕ್ ಮೇಲೆ ಮುನಿಸು?

Sania

ದುಬೈ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​​ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೆಲ ತಿಂಗಳ ಹಿಂದೆ ಭಾರೀ ಸಂಚಲನ ಸೃಷ್ಟಿಸಿತ್ತು. ಆ ಬಳಿಕ ಈ ಸುದ್ದಿ ತಣ್ಣಗಾಗಿತ್ತು. ಇದೀಗ ಮತ್ತೊಮ್ಮೆ ಸ್ಟಾರ್​ ದಂಪತಿಯ ಡಿವೋರ್ಸ್​ ವಿಚಾರ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಸಾನಿಯಾ ಮಿರ್ಜಾ ಮಾಡಿರುವ ನಿಗೂಢ ಪೋಸ್ಟ್​.

blank

ಇತ್ತೀಚೆಗೆ ಸಾನಿಯಾ ಮಿರ್ಜಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ಡಿವೋರ್ಸ್​ ಸಂಗತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅಷ್ಟಕ್ಕೂ ಸ್ಟೋರಿಯಲ್ಲಿ ಸಾನಿಯಾ ಏನು ಬರೆದುಕೊಂಡಿದ್ದಾರೆ ಅಂದರೆ, ಮದುವೆ ಕಷ್ಟ. ಡಿವೋರ್ಸ್​ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಬೊಜ್ಜು ಕಷ್ಟ. ಫಿಟ್ ಆಗಿರುವುದೂ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸಾಲದಲ್ಲಿರುವುದು ಕಷ್ಟ. ಆರ್ಥಿಕವಾಗಿ ಶಿಸ್ತಿನಿಂದ ಇರುವುದೂ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸಂವಹನ ಕಷ್ಟ. ಸಂವಹನ ನಡೆಸಿದರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ಇದು ಯಾವಾಗಲೂ ಕಠಿಣವಾಗಿರುತ್ತದೆ. ಆದರೆ, ನಾವು ನಮ್ಮ ಕಷ್ಟವನ್ನು ಆಯ್ಕೆ ಮಾಡಬಹುದು. ಬುದ್ಧಿವಂತಿಕೆಯಿಂದ ಆರಿಸಿ ಎಂದು ಸಾನಿಯಾ ಬರೆದುಕೊಂಡಿದ್ದಾರೆ.

Sania Mirza

ಸಾನಿಯಾ ಮತ್ತು ಶೋಯಿಬ್​​ ಮಲಿಕ್ ಡಿವೋರ್ಸ್ ಬಗ್ಗೆ ನಿರಂತರ ವದಂತಿಗಳ ಹರಡುತ್ತಿದ್ದರೂ ಸ್ಟಾರ್​ ದಂಪತಿ ಮಾತ್ರ ಇತ್ತೀಚೆಗೆ ತಮ್ಮ ಮಗ ಇಝಾನ್ ಈಜು ಸ್ಪರ್ಧೆಯಲ್ಲಿ ಗಳಿಸಿದ ಯಶಸ್ಸನ್ನು ಸಂಭ್ರಮಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳಗಳನ್ನು ಸಾನಿಯಾ ನಿರ್ವಹಿಸುತ್ತಿರುವ ಇಝಾನ್, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಒಂದು ಫೋಟೋದಲ್ಲಿ ಸಾನಿಯಾ ಅವರು ಪದಕವನ್ನು ಹೆಮ್ಮೆಯಿಂದ ಪ್ರದರ್ಶಿಸುವ ಇಜಾನ್ ಅನ್ನು ಹಿಡಿದಿರುವ ದೃಶ್ಯವಿದ್ದರೆ, ಇನ್ನೊಂದು ಫೋಟೋದಲ್ಲಿ ಇಝಾನ್ ಜೊತೆಗೆ ಶೋಯೆಬ್ ಮಲಿಕ್ ಥಂಬ್ಸ್-ಅಪ್ ಸಂಕೇತವನ್ನು ತೋರಿಸುತ್ತಾರೆ.

ಬೇರೆ ಬೇರೆ ವಾಸ
ಮೂಲಗಳ ಪ್ರಕಾರ ಸಾನಿಯಾ ಮತ್ತು ಶೋಯಿಬ್​​ ಬೇರೆ ಬೇರೆ ವಾಸ ಮಾಡುತ್ತಿದ್ದು, ತಮ್ಮ ಮಗ ಇಝಾನ್​ಗೆ ಸಹ ಪಾಲಕರಾಗಿದ್ದಾರೆ ಎಂದು ಹೇಳಲಾಗಿದೆ. ಡಿವೋರ್ಸ್​ ಬಗ್ಗೆ ಸಾಕಷ್ಟು ವದಂತಿಗಳು ಮುನ್ನೆಲೆಗೆ ಬಂದರೂ ಈ ಬಗ್ಗೆ ಅಧಿಕೃತವಾಗಿ ಇಬ್ಬರಿಂದಲೂ ಈವರೆಗೂ ಯಾವುದೇ ಹೇಳಿಕೆ ಬಂದಿಲ್ಲ. ಅಭಿಮಾನಿಗಳು ಕೂಡ ಇಬ್ಬರ ಹೇಳಿಕೆಗಾಗಿ ಕಾಯುತ್ತಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಿಗೂಢ ಪೋಸ್ಟ್​ ಹೊರತಾಗಿ ಯಾವುದೇ ಬೆಳವಣಿಗೆ ಕಾಣುತ್ತಿಲ್ಲ.

ಇನ್​ಸ್ಟಾಗ್ರಾಂ ಬಯೋ
ಕೆಲವು ತಿಂಗಳುಗಳ ಹಿಂದೆ ಶೋಯಿಬ್​ ಮಲಿಕ್​ ಅವರ ಇನ್​ಸ್ಟಾಗ್ರಾಂ ಬಯೋದಲ್ಲಾಗಿರುವ ಬದಲಾವಣೆ ಸಹ ಡಿವೋರ್ಸ್​ ವದಂತಿಗೆ ಪುಷ್ಠಿ ನೀಡಿತು ಮತ್ತು ಡಿವೋರ್ಸ್​ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಈ ಮೊದಲು ಬಯೋದಲ್ಲಿ ಸೂಪರ್​ವುಮ್ಯನ್​ ಸಾನಿಯಾ ಮಿರ್ಜಾರ ಪತಿ ಎಂದು ಶೋಯಿಬ್​ ಬರೆದುಕೊಂಡಿದ್ದರು. ಆದರೆ, ಅದನ್ನು ತೆಗೆದಿದ್ದಾರೆ. ಹೀಗಾಗಿ ಇಬ್ಬರ ಸಂಬಂಧದಲ್ಲಿ ಬಿರುಕು ಬಿಟ್ಟಿರುವುದು ಖಚಿತ ಎನ್ನಲಾಗಿತ್ತು.

ಅಂದಹಾಗೆ ಸಾನಿಯಾ ಮತ್ತು ಮಲಿಕ್​, ಕ್ರೀಡಾಲೋಕದ ಅತ್ಯಂತ ಸುಂದರವಾದ ಜೋಡಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಂಪ್ರದಾಯಿಕ ಎದುರಾಳಿ ಆಟಗಾರರಿಬ್ಬರ ಪ್ರೇಮವಿವಾಹವು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟರೂ ಎಲ್ಲ ವಿವಾದಗಳನ್ನು ಬದಿಗೊತ್ತಿ 2010ರಲ್ಲಿ ಇಬ್ಬರೂ ಮದುವೆ ಆಗಿದ್ದಾರೆ. ದಂಪತಿಗೆ ಇಝಾನ್​ ಮಿರ್ಜಾ ಮಲ್ಲಿಕ್ ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್​ಗೆ ಸಹ-ಪೋಷಕರಾಗಿದ್ದಾರೆ ಎನ್ನಲಾಗುತ್ತಿದೆ.

blank

ವದಂತಿ ಆರಂಭವಾಗಿದ್ದು ಯಾವಾಗ?
ಕಳೆದ ವರ್ಷ ನವೆಂಬರ್​ 11ರಂದು ಸಾನಿಯಾ ಮಿರ್ಜಾ ಇನ್​ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್​ ಹಾಕಿದ್ದರು. ಅದರಲ್ಲಿ “ಕಠಿಣ ದಿನಗಳು ಮತ್ತು ಒಡೆದ ಹೃದಯಗಳು” ಎಂದು ಬರೆದುಕೊಂಡಿದ್ದರು. ಅಲ್ಲಿಂದಾಚೆಗೆ ಇಬ್ಬರ ಬ್ರೇಕಪ್​ ವದಂತಿ ಹರಡಲು ಆರಂಭವಾಯಿತು. ಇದರ ನಡುವೆ ಒಮ್ಮೆ ಇಝಾನ್ ಜೊತೆಗಿನ ಮುದ್ದಾದ ಫೋಟೋವನ್ನು ಸಾನಿಯಾ ಹಂಚಿಕೊಂಡು, ಕಠಿಣ ದಿನಗಳಲ್ಲಿ ನನ್ನನ್ನು ಪಡೆಯುವ ಕ್ಷಣಗಳು ಎಂದು ಬರೆದಿದ್ದರು. ಇಷ್ಟೇ ಅಲ್ಲದೆ, ಶೋಯಿಬ್ ಮತ್ತು ಸಾನಿಯಾ ದುಬೈನಲ್ಲಿ ಇಜಾನ್‌ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದರು. ಬರ್ತಡೇ ಪಾರ್ಟಿಯ ಅನೇಕ ಫೋಟೋಗಳನ್ನು ಶೋಯಿಬ್​​ ಹಂಚಿಕೊಂಡರೆ, ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದನ್ನೂ ಹಂಚಿಕೊಂಡಿಲ್ಲ ಇದು ಅನುಮಾನಗಳಿಗೆ ಕಾರಣವಾಗಿತ್ತು. (ಏಜೆನ್ಸೀಸ್​)

ನಾನು ಮುಗಿಸಿದ್ದೇನೆ! ಡಿವೋರ್ಸ್​ ವದಂತಿಗೆ ಮತ್ತೆ ಪುಷ್ಠಿ ನೀಡಿದ ಸಾನಿಯಾ ಮಿರ್ಜಾ ನಿಗೂಢ ಪೋಸ್ಟ್​

36ನೇ ವಸಂತಕ್ಕೆ ಕಾಲಿಟ್ಟ ಸಾನಿಯಾ ಮಿರ್ಜಾ: ಪತ್ನಿಯ ಹುಟ್ಟುಹಬ್ಬಕ್ಕೆ ಶೋಯಿಬ್​ ಮಾಡಿದ ಟ್ವೀಟ್​ ವೈರಲ್​!

ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…