ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!

blank

ದುಬೈ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ (Sania Mirza) ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​​ ಮಲಿಕ್ (Shoib Malik) ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೆಲ ದಿನದಿಂದ ಹರಿದಾಡುತ್ತಿದೆ. ಇದು ವದಂತಿಯೋ? ಅಥವಾ ನಿಜವೋ? ಎಂಬುದು ಈವರೆಗೂ ಸಾಬೀತಾಗಿಲ್ಲ. ಈ ಕ್ಷಣದವರೆಗೂ ಸಾನಿಯಾ ಆಗಲಿ ಅಥವಾ ಮಲಿಕ್​​ ಆಗಲಿ ಪ್ರತಿಕ್ರಿಯೆ ನೀಡದಿರುವುದು ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ.

ಸಾನಿಯಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಇಬ್ಬರು ಈಗಾಗಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಡಿವೋರ್ಸ್​ ಪಡೆಯಲು ದಂಪತಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಸಾನಿಯಾ ಮತ್ತು ಮಲಿಕ್​ ಅವರ ಫ್ರೆಂಡ್ಸ್​ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಾನಿಯಾರ ಫ್ರೆಂಡ್ಸ್​ ಪ್ರಕಾರ ಈಗಾಗಲೇ ಇಬ್ಬರು ಒಂದು ನಿರ್ಧಾರಕ್ಕೆ ಬಂದಿದ್ದು, ಇಬ್ಬರು ಡಿವೋರ್ಸ್​ ಪಡೆಯಲು ತಯಾರಿ ನಡೆಸುತ್ತಿದ್ದಾರಂತೆ. ಈಗಾಗಲೇ ಡಿವೋರ್ಸ್​ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಮತ್ತೊಂದೆಡೆ ಶೋಯೆಬ್ ಮಲಿಕ್ ಅವರ ಪಾಕಿಸ್ತಾನ ಕ್ರಿಕೆಟ್ ಮ್ಯಾನೇಜ್‌ಮೆಂಟ್ ಸದಸ್ಯರೂ ಇದನ್ನು ಖಚಿತಪಡಿಸಿದ್ದಾರೆ. ಇಬ್ಬರೂ ಬೇರ್ಪಟ್ಟಿದ್ದಾರೆ ಮತ್ತು ವಿಚ್ಛೇದನ ಪಡೆಯುತ್ತಿದ್ದಾರೆ ಎಂದು ಪಾಕಿಸ್ತಾನಿ ಕ್ರಿಕೆಟ್ ಸದಸ್ಯರು ಬಹಿರಂಗಪಡಿಸಿದ್ದಾರೆ. ಸದ್ಯ ಸಾನಿಯಾ ಮಿರ್ಜಾ ದುಬೈನಲ್ಲಿ ತಂಗಿದ್ದು, ಶೋಯೆಬ್ ಮಲಿಕ್ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಮಗನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ದುಬೈನಲ್ಲಿ ಸಾನಿಯಾರನ್ನು ಭೇಟಿಯಾದರು.

ಅಂದಹಾಗೆ ಸಾನಿಯಾ ಮತ್ತು ಮಲಿಕ್​, ಕ್ರೀಡಾಲೋಕದ ಅತ್ಯಂತ ಸುಂದರವಾದ ಜೋಡಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಂಪ್ರದಾಯಿಕ ಎದುರಾಳಿ (India vs Pakistan) ಗಳ ಆಟಗಾರರಿಬ್ಬರ ಪ್ರೇಮವಿವಾಹವು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟರೂ ಎಲ್ಲ ವಿವಾದಗಳನ್ನು ಬದಿಗೊತ್ತಿ 2010ರಲ್ಲಿ ಇಬ್ಬರೂ ಮದುವೆ ಆಗಿದ್ದಾರೆ. ದಂಪತಿಗೆ ಇಜಾನ್​ ಮಿರ್ಜಾ ಮಲ್ಲಿಕ್ (Izan Mirza Malik) ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್​ಗೆ ಸಹ-ಪೋಷಕರಾಗಿದ್ದಾರೆ ಎನ್ನಲಾಗುತ್ತಿದೆ.

ಇಬ್ಬರ ನಡುವೆ ಏನು ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ, ಶೋಯಿಬ್​ (Shoib), ತನ್ನ ಟಿವಿ ಶೋನಲ್ಲಿ ಸಾನಿಯಾಗೆ (Sania Mirza) ಮೋಸ ಮಾಡಿದ್ದಾರೆ ಎಂದು ಕೆಲವು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಸುದ್ದಿಗೆ ಸಾನಿಯಾ (Sania) ಆಗಲಿ ಅಥವಾ ಶೋಯಿಬ್​ (Shoib)​ ಆಗಲಿ ಇನ್ನೂ ಪ್ರತಿಕ್ರಿಯಿಸಿಲ್ಲ. ಇದೀಗ ಅವರ ಹೇಳಿಕೆಗಳ ಮೇಲೆ ಎಲ್ಲವೂ ನಿರ್ಧಾರವಾಗುತ್ತದೆ. ಹೀಗಾಗಿ ಅಭಿಮಾನಿಗಳು ಇಬ್ಬರ ಹೇಳಿಕೆಗಾಗಿ ಎದುರು ನೋಡುತ್ತಿದ್ದಾರೆ.

ಬ್ರೇಕಪ್​ ಸುದ್ದಿ ಹರಡಲು ಕಾರಣವೇನು?
ಇತ್ತೀಚೆಗೆ Sania Mirza ಇನ್​ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್​ ಹಾಕಿದ್ದರು. ಅದರಲ್ಲಿ “ಕಠಿಣ ದಿನಗಳು ಮತ್ತು ಒಡೆದ ಹೃದಯಗಳು” ಎಂದು ಬರೆದುಕೊಂಡಿದ್ದರು. ಅಲ್ಲಿಂದಾಚೆಗೆ ಇಬ್ಬರ ಬ್ರೇಕಪ್​ (Breakup) ವದಂತಿ ಹರಡಲು ಆರಂಭವಾಗಿದೆ. ಕಳೆದ ಶುಕ್ರವಾರ ಇಝಾನ್ ಜೊತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿರುವ ಸಾನಿಯಾ, ಕಠಿಣ ದಿನಗಳಲ್ಲಿ ನನ್ನನ್ನು ಪಡೆಯುವ ಕ್ಷಣಗಳು ಎಂದು ಬರೆದಿದ್ದಾರೆ. ಇಷ್ಟೇ ಅಲ್ಲದೆ, ಶೋಯೆಬ್ ಮತ್ತು ಸಾನಿಯಾ ಇತ್ತೀಚೆಗಷ್ಟೇ ದುಬೈನಲ್ಲಿ ಇಜಾನ್‌ನ (Izan Mirza Malik) ನಾಲ್ಕನೇ ಹುಟ್ಟುಹಬ್ಬವನ್ನು ಆಚರಿಸಿದರು. ಬರ್ತಡೇ ಪಾರ್ಟಿಯ ಅನೇಕ ಫೋಟೋಗಳನ್ನು ಶೋಯಿಬ್​​ ಹಂಚಿಕೊಂಡರೆ, ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದನ್ನೂ ಹಂಚಿಕೊಂಡಿಲ್ಲ ಇದು ಅನುಮಾನಗಳಿಗೆ ಕಾರಣವಾಗಿದೆ.

View this post on Instagram

A post shared by Sania Mirza (@mirzasaniar)

ಅಂದಹಾಗೆ ಸಾನಿಯಾ ಮಿರ್ಜಾ (Sania Mirza) ಮತ್ತು ಶೋಯಿಬ್​ ಮಲಿಕ್ (Shoib Malik) 2010ರ ಏಪ್ರಿಲ್ 12ರಂದು ಹೈದರಾಬಾದ್‌ನಲ್ಲಿರುವ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಸಾಂಪ್ರದಾಯಿಕ ಹೈದರಾಬಾದಿ ಮುಸ್ಲಿಂ ಸಂಪ್ರದಾಯದಂತೆ ವಿವಾಹವಾದರು. ಇದಾದ ನಂತರ ಪಾಕಿಸ್ತಾನಿ ಪದ್ಧತಿಯಂತೆ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಮದುವೆ ನಡೆಯಿತು. (ಏಜೆನ್ಸೀಸ್​)

ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಶೋಯೆಬ್​ ಜತೆ ಡಿವೋರ್ಸ್!​ ವದಂತಿಗೆ ಪುಷ್ಟಿ ನೀಡಿದ ಮತ್ತೊಂದು ನೋವಿನ ಪೋಸ್ಟ್​

ಸೂರ್ಯಕುಮಾರ್​ರನ್ನು ಸುಲಭವಾಗಿ ಔಟ್​ ಮಾಡುವುದು ಹೇಗೆ? ಪಾಕ್​ ಮಾಜಿ ಆಟಗಾರ ಕೊಟ್ಟ ಸಲಹೆ ಇದು

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…