ಸಾನಿಯಾ-ಶೋಯಿಬ್​​ ಮಧ್ಯೆ ಆಯೇಶಾ? ಡಿವೋರ್ಸ್​ ವದಂತಿಗೆ ಸ್ಫೋಟಕ ತಿರುವು ಕೊಟ್ಟ ಪಾಕ್​ ಮಾಧ್ಯಮಗಳು!

blank

ದುಬೈ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ (Sania Mirza) ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​ ಮಲಿಕ್ (Shoib Malik) ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೆಲ ದಿನದಿಂದ ಹರಿದಾಡುತ್ತಿದೆ. ಇದು ವದಂತಿಯೋ? ಅಥವಾ ನಿಜವೋ? ಎಂಬುದು ಈವರೆಗೂ ಸಾಬೀತಾಗಿಲ್ಲ. ಈ ಕ್ಷಣದವರೆಗೂ ಸಾನಿಯಾ ಆಗಲಿ ಅಥವಾ ಶೋಯಿಬ್​​ ಆಗಲಿ ಪ್ರತಿಕ್ರಿಯೆ ನೀಡದಿರುವುದು ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ. ಇದರ ನಡುವೆ ಮತ್ತೊಂದು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಏನೆಂಬುದು ಇದೀಗ ಬಹಿರಂಗವಾಗಿದೆ.

ಇಬ್ಬರು ಈಗಾಗಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಡಿವೋರ್ಸ್​ ಪಡೆಯಲು ದಂಪತಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಡಿವೋರ್ಸ್​ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇದೀಗ ಸಾನಿಯಾ-ಶೋಯಿಬ್​​​ ಡಿವೋರ್ಸ್​ ಪ್ರಕರಣಕ್ಕೆ ಪಾಕ್​ ಮಾಧ್ಯಮಗಳು ಮತ್ತೊಂದು ತಿರುವು ನೀಡಿವೆ. ಇಬ್ಬರ ವೈಮನಸ್ಸಿಗೆ ಪಾಕಿಸ್ತಾನ ಮಾಡೆಲ್​ ಆಯೇಶಾ ಓಮರ್​ (Ayesha Omar) ಕಾರಣ ಎಂದು ವರದಿಯಾಗುತ್ತಿದೆ. ಈ ಹಿಂದೆ ಶೋಯಿಬ್​​ ​ ಜೊತೆ ಬೋಲ್ಡ್​ ಫೋಟೋಶೂಟ್​ನಲ್ಲಿ ಪಾಲ್ಗೊಂಡಿದ್ದು ಕೂಡ ಇದೇ ಮಾಡೆಲ್​ ಎಂಬುದನ್ನು ಇಲ್ಲಿ ನೆನಪಿಸಲೇಬೇಕು.

ಬೋಲ್ಡ್​ ಫೋಟೋಶೂಟ್​ ಬಗ್ಗೆ ನಿಮ್ಮ ಪತ್ನಿ ಸಾನಿಯಾರ ಅಭಿಪ್ರಾಯ ಏನು ಎಂದು ಈ ಹಿಂದೆ ಪ್ರಶ್ನೆ ಮಾಡಲಾಗಿತ್ತು. ಆದರೆ, ಈ ವೇಳೆ ಶೋಯಿಬ್​​​ ಸೂಕ್ತವಾದ ಉತ್ತರವನ್ನು ನೀಡಿರಲಿಲ್ಲ. ಆಯೇಷಾ ಜೊತೆ ಶೋಯಿಬ್​ಗೆ ಸಂಬಂಧ ಇದೆ ಎಂದು ಪಾಕ್​ ಮಾಧ್ಯಮಗಳು ಹೇಳುತ್ತಿವೆ. ಅಲ್ಲದೆ, ಆಯೇಷಾ ಜೊತೆ ಸೇರಿ ತನಗೆ ಮೋಸ ಮಾಡುತ್ತಿರುವುದನ್ನು ಸ್ವತಃ ಸಾನಿಯಾರೇ ಕಂಡುಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಶೋಯಿಬ್​ರಿಂದ ಸಾನಿಯಾ ಅಂತರ ಕಾಯ್ದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೊಂದೆಡೆ ಶೋಯಿಬ್​​ ಅವರ ಪಾಕಿಸ್ತಾನ ಕ್ರಿಕೆಟ್ ಮ್ಯಾನೇಜ್‌ಮೆಂಟ್ ಸದಸ್ಯರೂ ಇದನ್ನು ಖಚಿತಪಡಿಸಿದ್ದಾರೆ. ಇಬ್ಬರೂ ಬೇರ್ಪಟ್ಟಿದ್ದಾರೆ ಮತ್ತು ವಿಚ್ಛೇದನ ಪಡೆಯುತ್ತಿದ್ದಾರೆ ಎಂದು ಪಾಕಿಸ್ತಾನಿ ಕ್ರಿಕೆಟ್ ಸದಸ್ಯರು ಬಹಿರಂಗಪಡಿಸಿದ್ದಾರೆ. ಸದ್ಯ ಸಾನಿಯಾ ಮಿರ್ಜಾ ದುಬೈನಲ್ಲಿ ತಂಗಿದ್ದು, ಶೋಯಿಬ್​​ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಮಗನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ದುಬೈನಲ್ಲಿ ಸಾನಿಯಾರನ್ನು ಭೇಟಿಯಾದರು.

ಅಂದಹಾಗೆ ಸಾನಿಯಾ ಮತ್ತು ಶೋಯಿಬ್​​​, ಕ್ರೀಡಾಲೋಕದ ಅತ್ಯಂತ ಸುಂದರವಾದ ಜೋಡಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಂಪ್ರದಾಯಿಕ ಎದುರಾಳಿ (India vs Pakistan) ಗಳ ಆಟಗಾರರಿಬ್ಬರ ಪ್ರೇಮವಿವಾಹವು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟರೂ ಎಲ್ಲ ವಿವಾದಗಳನ್ನು ಬದಿಗೊತ್ತಿ 2010ರಲ್ಲಿ ಇಬ್ಬರೂ ಮದುವೆ ಆಗಿದ್ದಾರೆ. ದಂಪತಿಗೆ ಇಜಾನ್​ ಮಿರ್ಜಾ ಮಲ್ಲಿಕ್ (Izan Mirza Malik) ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್​ಗೆ ಸಹ-ಪೋಷಕರಾಗಿದ್ದಾರೆ ಎನ್ನಲಾಗುತ್ತಿದೆ.

ಇಬ್ಬರ ನಡುವೆ ಏನು ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ, ಶೋಯಿಬ್​​ (Shoib), ತನ್ನ ಟಿವಿ ಶೋನಲ್ಲಿ ಸಾನಿಯಾಗೆ (Sania Mirza) ಮೋಸ ಮಾಡಿದ್ದಾರೆ ಎಂದು ಕೆಲವು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಸುದ್ದಿಗೆ ಸಾನಿಯಾ (Sania) ಆಗಲಿ ಅಥವಾ ಶೋಯಿಬ್​​ (Shoib)​ ಆಗಲಿ ಇನ್ನೂ ಪ್ರತಿಕ್ರಿಯಿಸಿಲ್ಲ. ಇದೀಗ ಅವರ ಹೇಳಿಕೆಗಳ ಮೇಲೆ ಎಲ್ಲವೂ ನಿರ್ಧಾರವಾಗುತ್ತದೆ. ಹೀಗಾಗಿ ಅಭಿಮಾನಿಗಳು ಇಬ್ಬರ ಹೇಳಿಕೆಗಾಗಿ ಎದುರು ನೋಡುತ್ತಿದ್ದಾರೆ.

ಬ್ರೇಕಪ್​ ಸುದ್ದಿ ಹರಡಲು ಕಾರಣವೇನು?
ಇತ್ತೀಚೆಗೆ Sania Mirza ಇನ್​ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್​ ಹಾಕಿದ್ದರು. ಅದರಲ್ಲಿ “ಕಠಿಣ ದಿನಗಳು ಮತ್ತು ಒಡೆದ ಹೃದಯಗಳು” ಎಂದು ಬರೆದುಕೊಂಡಿದ್ದರು. ಅಲ್ಲಿಂದಾಚೆಗೆ ಇಬ್ಬರ ಬ್ರೇಕಪ್​ (Breakup) ವದಂತಿ ಹರಡಲು ಆರಂಭವಾಗಿದೆ. ಕಳೆದ ಶುಕ್ರವಾರ ಇಝಾನ್ ಜೊತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿರುವ ಸಾನಿಯಾ, ಕಠಿಣ ದಿನಗಳಲ್ಲಿ ನನ್ನನ್ನು ಪಡೆಯುವ ಕ್ಷಣಗಳು ಎಂದು ಬರೆದಿದ್ದಾರೆ. ಇಷ್ಟೇ ಅಲ್ಲದೆ, ಶೋಯಿಬ್​​ ಮತ್ತು ಸಾನಿಯಾ ಇತ್ತೀಚೆಗಷ್ಟೇ ದುಬೈನಲ್ಲಿ ಇಜಾನ್‌ನ (Izan Mirza Malik) ನಾಲ್ಕನೇ ಹುಟ್ಟುಹಬ್ಬವನ್ನು ಆಚರಿಸಿದರು. ಬರ್ತಡೇ ಪಾರ್ಟಿಯ ಅನೇಕ ಫೋಟೋಗಳನ್ನು ಶೋಯಿಬ್​​ ಹಂಚಿಕೊಂಡರೆ, ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದನ್ನೂ ಹಂಚಿಕೊಂಡಿಲ್ಲ ಇದು ಅನುಮಾನಗಳಿಗೆ ಕಾರಣವಾಗಿದೆ.

ಅಂದಹಾಗೆ ಸಾನಿಯಾ ಮಿರ್ಜಾ (Sania Mirza) ಮತ್ತು ಶೋಯಿಬ್​​ ಮಲಿಕ್ (Shoib Malik) 2010ರ ಏಪ್ರಿಲ್ 12ರಂದು ಹೈದರಾಬಾದ್‌ನಲ್ಲಿರುವ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಸಾಂಪ್ರದಾಯಿಕ ಹೈದರಾಬಾದಿ ಮುಸ್ಲಿಂ ಸಂಪ್ರದಾಯದಂತೆ ವಿವಾಹವಾದರು. ಇದಾದ ನಂತರ ಪಾಕಿಸ್ತಾನಿ ಪದ್ಧತಿಯಂತೆ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಮದುವೆ ನಡೆಯಿತು. (ಏಜೆನ್ಸೀಸ್​)

ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!

ಶೋಯೆಬ್​ ಜತೆ ಡಿವೋರ್ಸ್!​ ವದಂತಿಗೆ ಪುಷ್ಟಿ ನೀಡಿದ ಮತ್ತೊಂದು ನೋವಿನ ಪೋಸ್ಟ್​

ಕಾಂಡೋಮ್​ ಬಳಸುವಂತೆ ಮನವಿ ಮಾಡಿದ್ರೂ ಕೇಳಲಿಲ್ಲ: ಲಂಕಾ ಕ್ರಿಕೆಟಿಗನ ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ

Share This Article

ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone

ನವದೆಹಲಿ:  ( smartphone ) ಇತ್ತೀಚಿನ ದಿನಗಳಲ್ಲಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಮೊಬೈಲ್…

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…