More

    ಗ್ರಾಮೀಣ ಭಾಗಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

    ಸಾಗರ: ತಾಲೂಕಿನ ಶಾಲೆಗಳಿಗೆ ಸ್ಯಾನಿಟೈಸ್ ಹಾಗೂ ಗ್ರಾಮೀಣ ಭಾಗಗಳಿಗೆ ಬಸ್ ಬಿಡುವಂತೆ ಒತ್ತಾಯಿಸಿ ಸಾಗರ ತಾಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದಿಂದ ಎಸಿ ವಿ.ಪ್ರಸನ್ನ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

    ಡಿ.27ರಂದು ಗ್ರಾಪಂಗಳಿಗೆ ಚುನಾವಣೆ ನಡೆಯುತ್ತಿದೆ. ಜತೆಗೆ ಜ.1ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ತಾಲೂಕಿನ ಎಲ್ಲ ಶಾಲೆಗಳಿಗೆ ಗ್ರಾಪಂ ಹಾಗೂ ನಗರಸಭೆ, ಪಪಂಗಳಿಂದ ಸ್ಯಾನಿಟೈಸ್ ಮಾಡಿಸಲು ಸಂಬಂಧಿಸಿದ ಇಲಾಖೆಗೆ ಸೂಕ್ತ ಮಾರ್ಗದರ್ಶನ ನೀಡಲು ಮನವಿಯಲ್ಲಿ ಒತ್ತಾಯಿಸಿದರು.

    ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು ಗ್ರಾಮೀಣ ಭಾಗಗಳಿಗೆ ಹಾಗೂ ಗ್ರಾಮೀಣ ಭಾಗಗಳಿಂದ ಪಟ್ಟಣಕ್ಕೆ ಬರುವ ಮಕ್ಕಳು ಹಾಗೂ ಶಿಕ್ಷಕರಿಗೆ ಬಸ್ ಸೌಕರ್ಯ ಇಲ್ಲದೆ ಸಮಸ್ಯೆಯಾಗಿದೆ. ಬಸ್ ಸೌಕರ್ಯ ಇಲ್ಲದೆ ಶಾಲೆಗಳಿಗೆ ಮಕ್ಕಳು ಬರುವುದು ಕಷ್ಟ. ಗ್ರಾಮೀಣ ಭಾಗಗಳಿಗೆ ಬಸ್ ಬಿಡುವ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸಿದರು.

    ಸಂಘದ ತಾಲೂಕು ಅಧ್ಯಕ್ಷ ಡಿ.ಗಣಪತಪ್ಪ, ಕಾರ್ಯದರ್ಶಿ ಎಂ.ವೈ.ಮೂರ್ತಿ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿ.ಟಿ.ಸ್ವಾಮಿ, ಕಾರ್ಯದರ್ಶಿ ಸಿ.ನಾಗರಾಜ, ಜಿಲ್ಲಾ ಉಪಾಧ್ಯಕ್ಷ ಪ್ರಭು, ನೌಕರರ ಸಂಘದ ನಿರ್ದೇಶಕ ಮಾಲತೇಶಪ್ಪ, ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ ಭೂಕೇಶ್ವರಪ್ಪ, ಪ್ರಮುಖರಾದ ಟಿ.ವಿ.ಮನೋಹರ, ರಮೇಶ್ ನಾರಾಯಣ, ಶಾರದಾ, ಬೂದ್ಯಪ್ಪ, ಸತ್ಯಪ್ಪ, ಎಂ.ಪಿ.ಸತ್ಯನಾರಾಯಣ, ನೂರ್​ಅಹಮ್ಮದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts