More

    ಭಾರತೀ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ

    ಕೆ.ಎಂ.ದೊಡ್ಡಿ: ಇಲ್ಲಿನ ಭಾರತೀ ಕಾಲೇಜಿನಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿತು.

    ಬಿಇಟಿ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಮಾದೇಗೌಡ ರಾಶಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎತ್ತಿನಗಾಡಿಯಲ್ಲಿ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟ ವಿದ್ಯಾರ್ಥಿಗಳು, ಅಧ್ಯಾಪಕರನ್ನು ಕೂರಿಸಿಕೊಂಡು ಸಾಗಿದ್ದು ವಿಶೇಷವಾಗಿತ್ತು. ಮಳವಳ್ಳಿ-ಮದ್ದೂರು ಮುಖ್ಯರಸ್ತೆಯಲ್ಲಿ ನೂರಾರು ಎತ್ತಿನಗಾಡಿಗಳ ಮೂಲಕ ಕೋಲಾಟ ಮತ್ತು ಪೂಜಾ ಕುಣಿತ, ಗಾರುಡಿಗೊಂಬೆ ಸೇರಿದಂತೆ ಜನಪದ ಕಲಾ ಪ್ರಕಾರಗಳ ಮೂಲಕ ನಡೆದ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ಕಾಲೇಜಿನ ತುಂಬೆಲ್ಲ ಸಂಭ್ರಮದ ವಾತಾವರಣ ಮನೆಮಾಡಿತ್ತು. ವಿವಿಧ ವೇಷಭೂಷಣ ಧರಿಸಿ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

    ಭರ್ಜರಿ ವ್ಯಾಪಾರ: ವಿದ್ಯಾರ್ಥಿಗಳೇ ತಯಾರು ಮಾಡಿದ ಚಕ್ಕುಲಿ, ನಿಪ್ಪಟ್ಟು, ರವೆ ಉಂಡೆ ಸೇರಿದಂತೆ ಮನೆಯ ತೋಟದಲ್ಲಿ ಬೆಳೆದ ತರಕಾರಿ, ಸೌತೆಕಾಯಿ, ಹಸಿರುಕಾಳು ಹಾಗೂ ಮಜ್ಜಿಗೆ ಪಾನಕ, ಹೋಳಿಗೆ, ಕಜ್ಜಾಯ, ರಾಗಿ ರೋಟ್ಟಿ ವ್ಯಾಪಾರ ಬಲು ಜೋರಾಗಿ ನಡೆಯಿತು. ವಿದ್ಯಾರ್ಥಿಗಳಿಂದ ಹಾಡು, ನೃತ್ಯ, ಹಾಸ್ಯ, ಗಾದೆ, ಒಗಟು ಸೇರಿದಂತೆ ಹರಟೆ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ, ಬಿಇಟಿ ಟ್ರಸ್ಟ್ ಚೇರ‌್ಮನ್ ಮಧು ಜಿ.ಮಾದೇಗೌಡ ಮಾತನಾಡಿ, ವಿದೇಶಿ ಸಂಸ್ಕೃತಿಗೆ ಮಾರು ಹೋಗಿ ವಿದ್ಯಾವಂತ ಯುವ ಜನತೆಯೇ ದೇಶಿಯ ಸಂಸ್ಕೃತಿಯನ್ನು ಮರೆಯುತ್ತಿರುವುದು ನಾಚೀಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ವೇದಿಕೆಯಲ್ಲಿ ಬಿಇಟಿ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಮಾದೇಗೌಡ, ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಸಿದ್ದೇಗೌಡ, ಟ್ರಸ್ಟಿಗಳಾದ ಜಯರಾಮು, ಕಾರ್ಕಹಳ್ಳಿ ಬಸವೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಸಲ್ಯ ಅರ್ಕೇಶ್, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ಕಾರ್ಯಕ್ರಮದ ಆಯೋಜಕರಾದ ಡಾ.ಪಿ.ನಾಗೇಂದ್ರ, ಪ್ರೊ.ಎಸ್.ರೇವಣ್ಣ, ಡಾ.ಎಂ.ಎಸ್.ಮಹದೇವಸ್ವಾಮಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts