ಸಂಕ್ರಾಂತಿಗೆ ನೂತನ ಅಧ್ಯಕ್ಷ

Sankranti is the new president
Published on

ಮಡಿಕೇರಿ
ಸಂಕ್ರಾಂತಿ ವೇಳೆಗೆ ಕೊಡಗು ಜೆಡಿಎಸ್ ಅಧ್ಯಕ್ಷರ ನೇಮಕ ಆಗಲಿದೆ ಎಂದು ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಡಿಕೇರಿ ಸಮೀಪದ ಹಾಕತ್ತೂರಿನಲ್ಲಿ ಮಂಗಳವಾರ ಸಂಜೆ ನಡೆದ ಜೆಡಿಎಸ್ ಪ್ರಮುಖರ ಸಭೆಯಲ್ಲಿ ಮಾತನಾಡಿದರು.

ಕೊಡಗಿನಲ್ಲಿ ಕೆ.ಎಂ. ಗಣೇಶ್ ರಾಜೀನಾಮೆ ಬಳಿಕ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೆರವಾಗಿದೆ. ಜ. 15 ರೊಳಗಾಗಿ ಸಂಕ್ರಾAತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಕೊಡಗಿನಲ್ಲಿ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷö್ಮವಾಗಿ ಗಮನಿಸಲಾಗುತ್ತಿದೆ. ಜೆಡಿಎಸ್‌ನ ನಿಷ್ಟಾವಂತರೊAದಿಗೆ ಚರ್ಚಿಸಿ ಅವರ ಅಭಿಪ್ರಾಯ ಪಡೆಯಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸೂಕ್ತವಾಗಬಲ್ಲ ಸಮರ್ಥ ಅಧ್ಯಕ್ಷರನ್ನೇ ಆಯ್ಕೆ ಮಾಡಲಾಗುವುದು ಎಂದು ತಮ್ಮನ್ನು ಭೇಟಿಯಾಗಿ ಚರ್ಚಿಸಿದ ಜೆಡಿಎಸ್ ಮುಖಂಡರಿಗೆ ಕುಮಾರಸ್ವಾಮಿ ಭರವಸೆ ನೀಡಿದರು. ಈ ಸಂಬAಧ ಕೊಡಗು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net