ಬೆಂಗಳೂರು: ಕರ್ನಾಟಕದಲ್ಲಿ ತಮ್ಮ ವಹಿವಾಟು ವಿಸ್ತರಿಸಲು ಅಮೆರಿಕದ ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇದಲ್ಲಿ ಪಾಲ್ಗೊಳ್ಳುವಂತೆ ಅಮೆರಿಕ ಕಂಪನಿಗಳಿಗೆ ಅಧಿಕೃತ ಆಹ್ವಾನ ನೀಡಿದ ನಂತರ ಅವರು ಮಾತನಾಡಿದರು.
ಇದನ್ನೂ ಓದಿ: ದೆಹಲಿಯ ಅತಿದೊಡ್ಡ ಡ್ರಗ್ಸ್ ದಂಧೆ: 17 ವರ್ಷ ಬ್ರಿಟನ್ನಲ್ಲಿದ್ದ ವ್ಯಕ್ತಿ ಪಂಜಾಬ್ನಲ್ಲಿ ಬಂಧನ!
ತಯಾರಿಕಾ ದಕ್ಷತೆ ಹೆಚ್ಚಿಸುವ ಸೇವೆ ಹಾಗೂ ತಂತ್ರಜ್ಞಾನ ಒದಗಿಸುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ಇರುವ ಸನ್ಮಿನಾ ಕಂಪನಿಯ ವಿಸ್ತರಣಾ ಯೋಜನೆಗಳಿಗೆ ರಾಜ್ಯ ಸರ್ಕಾರವು ಸಂಪೂರ್ಣ ಬೆಂಬಲ ನೀಡುವುದಾಗಿ ಸಚಿವ ಪಾಟೀಲ ಅವರು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆಗಳನ್ನು ಲೀಪ್‌ಫೈವ್ ಟೆಕ್ನಾಲಜಿಯ ಸಿಇಒ ಅಗ್ಲೈಯಾ ಕಾಂಗ್ ಅವರು ಸಚಿವ ಪಾಟೀಲ ಅವರ ಗಮನಕ್ಕೆ ತಂದಿದ್ದಾರೆ.
#Sanmina ಸಂಸ್ಥೆಗೆ ಭೇಟಿ ; ಮಹತ್ವದ ಮಾತುಕತೆ
ವಿಶ್ವದ ಅತ್ಯಂತ ಸಂಕೀರ್ಣ, ಎಲೆಕ್ಟ್ರಾನಿಕ್ ಮತ್ತು ಮೆಕ್ಯಾನಿಕಲ್ ಉತ್ಪನ್ನಗಳನ್ನು ವಿನ್ಯಾಸಗೊಳಿಸುವ, ತಯಾರಿಸುವ ಮತ್ತು ದುರಸ್ತಿ ಮಾಡುವ ಹಾಗೂ ಭವಿಷ್ಯದ 500 ಕಂಪೆನಿಗಳಲ್ಲಿ ಒಂದೆಂಬ ಖ್ಯಾತಿ ಹೊಂದಿರುವ ಅಮೆರಿಕ ಮೂಲದ ಬಹುರಾಷ್ಟ್ರೀಯ #Sanmina ಸಂಸ್ಥೆಗೆ ಈದಿನ ಭೇಟಿನೀಡಿ ಉನ್ನತ ಮಟ್ಟದ… pic.twitter.com/v84SXlIhGd— M B Patil (@MBPatil) October 4, 2024
ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.
ಸಚಿವರ ನೇತೃತ್ವದಲ್ಲಿನ ನಿಯೋಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಮಹೇಶ್ ಅವರು ಇದ್ದರು.
Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ದೋಚಿದ ಗುಂಪು!