More

    ಸಂಸತ್ ಭವನಕ್ಕೆ ಅನುಭವ ಮಂಟಪ ನಾಮಕರಣ ಮಾಡಿ; ವೀರಶೈವ ವೇದಿಕೆ ಒತ್ತಾಯ

    ಶಿವಮೊಗ್ಗ: ನೂತನ ಸಂಸತ್ ಭವನಕ್ಕೆ ಅನುಭವ ಮಂಟಪವೆಂದು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಿವಮೊಗ್ಗ ತಾಲೂಕು ಅಧ್ಯಕ್ಷ ಬಿ.ಜಿ.ಧನರಾಜ್ ಒತ್ತಾಯಿಸಿದರು.
    ವಿಶ್ವದಲ್ಲೇ ಮೊಟ್ಟಮೊದಲಿಗೆ ಸಂಸತ್ ಪರಿಕಲ್ಪನೆ ಕೊಟ್ಟಿದ್ದು ಬಸವಣ್ಣ ಅವರ ಅನುಭವ ಮಂಟಪ. ಹಾಗಾಗಿ ನೂತನ ಸಂಸತ್ ಭವನಕ್ಕೆ ಬಸವಣ್ಣನ ಹೆಸರು ಸೂಕ್ತ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈ ಬೇಡಿಕೆ ಬಗ್ಗೆ ಈಗಾಗಲೇ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೂ ಮನವಿ ಮಾಡಲಾಗುವುದು. ವೇದಿಕೆ ರಾಷ್ಟ್ರೀಯ ನಾಯಕರು ಸಿಎಂ ಬಸವರಾಜ ಬೊಮ್ಮಾಯಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ನಮ್ಮ ಮನವಿಯನ್ನು ತಲುಪಿಸುವ ಕೆಲಸ ಮಾಡಲಿದ್ದಾರೆ ಎಂದರು.
    ನಿರ್ಮಾಣ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು ಅನುಮೋದಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಸೂಕ್ತವಾಗಿದೆ. ಕರಾವಳಿ ಭಾಗದ ದೈವ ನರ್ತಕರಿಗೆ ಸರ್ಕಾರ 2 ಸಾವಿರ ರೂ. ಮಾಸಾಶನ ಘೋಷಣೆ ಮಾಡಿದ್ದಾರೆ. ಅದೇ ರೀತಿ ವೀರಶೈವ ಸಮಾಜದ ಪೌರಾಣಿಕ, ಐತಿಹಾಸಿಕ ಹಿನ್ನೆಲೆಯುಳ್ಳ ವೀರಗಾಸೆ ಕಲಾವಿದರು ಹಾಗೂ ಇತರ ಬಡ ಕಲಾವಿದರಿಗೂ ಮಾಸಾಶನ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.
    ರಾಜ್ಯ ಉಪಾಧ್ಯಕ್ಷ ಟಿ.ವಿ.ಬಿಂದುಕುಮಾರ್, ಜಿಲ್ಲಾ ಉಪಾಧ್ಯಕ್ಷ ಬಿ.ಶಿವರಾಜ್, ನವೀನ್ ವಾರದ್, ಗಂಗಾಧರ್, ಎಚ್.ಎಂ.ದರ್ಶನ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts