More

    ಸಂಸ್ಕಾರ ಬೆಳೆಸುವಲ್ಲಿ ತಾಯಂದಿರ ಪಾತ್ರ ಮುಖ್ಯ

    ಇಟಗಿ: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ತಾಯಂದಿರ ಪಾತ್ರ ಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ರೋಹಿಣಿ ಪಾಟೀಲ ಹೇಳಿದರು.

    ಸಮೀಪದ ಚಿಕ್ಕಮುನವಳ್ಳಿ ಗ್ರಾಮದ ಆರೂಢಮಠದಲ್ಲಿ 44ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಹಾಗೂ ಬ್ರಹ್ಮಲೀನ ಸದಾಶಿವಾನಂದ ಶ್ರೀಗಳ 14ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಮಹಿಳಾಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

    ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಹಿಳಾಗೋಷ್ಠಿ ಏರ್ಪಡಿಸಿ ಮಹಿಳೆಯರ ಸಬಲೀಕರಣಕ್ಕೆ ಚಿಕ್ಕಮುನವಳ್ಳಿ ಆರೂಢಮಠದ ಶಿವಪುತ್ರ ಸ್ವಾಮೀಜಿ ಪ್ರಾಶಸ್ತ್ಯ ನೀಡಿದ್ದಾರೆ. ಆಧ್ಯಾತ್ಮಿಕ ಕಾರ್ಯಕ್ರಮ ಮೂಲಕ ಯುವಕರು ಮತ್ತು ತಾಯಂದಿರಲ್ಲಿ ಜಾಗೃತಿ ಉಂಟು ಮಾಡುತ್ತಿರುವುದು ಅಭಿಮಾನದ ಸಂಗತಿ ಎಂದರು.

    ನಿವೃತ್ತ ಶಿಕ್ಷಕಿ ಅನ್ನಪೂರ್ಣಾ ಗಣಾಚಾರಿ ಮಾತನಾಡಿ, 12ನೇ ಶತಮಾನದಲ್ಲಿ ಅನೇಕ ಶರಣೆಯರು ವಚನಗಳನ್ನು ರಚಿಸುವ ಮೂಲಕ ಸಮ ಸಮಾಜ ನಿರ್ಮಿಸುವಲ್ಲಿ ಮಾದರಿಯಾಗಿದ್ದಾರೆ ಎಂದರು. ಕಲ್ಲೂರ ಆರೂಢ ವಿದ್ಯಾಶ್ರಮದ ಲಲಿತಮ್ಮ ತಾಯಿ ಮಾತನಾಡಿದರು. ಮಠದ ಪೀಠಾಧ್ಯಕ್ಷ ಶಿವಪುತ್ರ ಸ್ವಾಮೀಜಿ, ಜಯಂತಿ ಮಹೇಂದ್ರ, ಸೋಮೇಶ್ವರ ಸಕ್ಕರೆ ಕಾರ್ಖಾನೆ ನಿರ್ದೇಶಕಿಯರಾದ ಅನಿತಾ ಮೆಟಗುಡ್ಡ, ಕಸ್ತೂರಿ ಸೋಮನಟ್ಟಿ, ಗಂಗಮ್ಮ ದುರ್ಗನ್ನವರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts