ದೇಶದ ಅಭಿವೃದ್ಧಿಗಾಗಿ ಪ್ರಧಾನಿ‌ ಹುದ್ದೆಯನ್ನು‌ ಮೋದಿ ಬೇರೆಯವರಿಗೆ ಬಿಟ್ಟುಕೊಡಲಿ: Santosh Lad

Santosh Lad

ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.

ಗದಗದಲ್ಲಿ ಈ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್ (Santosh Lad)​, ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ನಾನು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದ್ದೇನೆ.

ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು.

Santosh Lad

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ ಅವರವರಿಗೆ ಬಿಟ್ಟಿದ್ದಾಗಿದೆ.ಯಾರೂ ಹೊಸ ಸಿಎಂ ವಿಚಾರವನ್ನು ತೇಲಿಬಿಟ್ಟಿದ್ದಾರೆಯೋ ಅವರನ್ನೇ ಸುದ್ದಿಗಾರರು ಪ್ರಶ್ನಿಸಬೇಕೇ ಹೊರತು ನನ್ನನ್ನಲ್ಲ. ನನಗೆ ಸಂಬಂಧವಿಲ್ಲದ ಅಥವಾ ತಿಳಿಯದೇ ಇರುವ ವಿಚಾರದ ಬಗ್ಗೆ ಮಾತನಾಡುವುದು‌ ಸೂಕ್ತವಲ್ಲ. ನಾನು‌ ಯಾರ ಪರ ವಿರುದ್ಧವಿಲ್ಲ. ನಾನು‌ ಕಾಂಗ್ರೆಸ್ ಪಕ್ಷದ ಪರ ಎಂದು‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಂಭಮೇಳದಲ್ಲಿ ಎಷ್ಟೊಂದು ಜನರ ಸಾವಾಗಿದೆ.ಸಾವಿರಾರು ಜನರಿಗೆ ಅನಾನುಕೂಲವಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ನೆರವಾಗುವಂತೆ ಸುದ್ದಿಗಾರರು ಕೇಂದ್ರವನ್ನು‌ ಪ್ರಶ್ನೆ ಮಾಡಬೇಕು ಎಂದು ಸಚಿವ ಸಂತೋಷ್​ ಲಾಡ್ (Santosh Lad) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮಗೆ ಪ್ರಧಾನಿ ಮೋದಿ ಉಚಿತ ಪ್ರಯಾಣ ಕಲ್ಪಿಸಿದ್ದಾರೆ; ಟಿಕೆಟ್​ ಇಲ್ಲದೇ ರೈಲಿನಲ್ಲಿ Maha Kumbh ಮೇಳಕ್ಕೆ ಹೋಗುತ್ತಿದ್ದ ಮಹಿಳೆಯರ ಉತ್ತರ ವೈರಲ್

ಚಾಂಪಿಯನ್ಸ್ ಟ್ರೋಫಿ ವೇಳೆ ಪತ್ನಿಯರ ಜತೆ ಇರಲು ಅವಕಾಶ ನೀಡಿದ BCCI; ಆದರೆ ಈ ಷರತ್ತನ್ನು ಪಾಲಿಸಿದರೆ ಮಾತ್ರ

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…