ಪೊಲೀಸ್‌ ಸಿಬ್ಬಂದಿಯಿಂದಲೇ ಅಕ್ರಮ ಮದ್ಯ ಸಾಗಣೆ

Santosh-Lamani
Published on

ಗೋಕರ್ಣ: ಕಾರಿನಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗೋಕರ್ಣ ಠಾಣೆ ಪೊಲೀಸರು ಬಂಽಸಿದ್ದಾರೆ. ಕಾರವಾರ ಕದ್ರಾ ಠಾಣೆಯ ಸಿಬ್ಬಂದಿ ಸಂತೋಷ ಲಮಾಣಿ ಬಂಧಿತ ಆರೋಪಿ.
ಗೋವಾದಿಂದ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಅಕ್ರಮ ಮದ್ಯವನ್ನು ಕಾರಿನಲ್ಲಿ ತುಂಬಿಕೊಂಡು ಗೋಕರ್ಣದ ಹೋಟೆಲ್, ರೆಸಾರ್ಟ್ಗಳಿಗೆ ಪೂರೈಸುತ್ತಿದ್ದ ವೇಳೆ ಆತನನ್ನು ಬಂಧಿಸಲಾಗಿದ್ದು, ಕಾರು ಹಾಗೂ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಗೋಕರ್ಣ ಠಾಣೆಯಲ್ಲಿ ಕೆಲಸ ಮಾಡಿದ್ದ ಸಿಬ್ಬಂದಿ ಇಲ್ಲಿನ ನಂಟು ಬೆಳೆಸಿಕೊಂಡಿದ್ದ ನಂತರ ನಿರಂತರವಾಗಿ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net